ಕರ್ನಾಟಕಪ್ರಮುಖ ಸುದ್ದಿ

ಪಿಡಿಒ ಹುದ್ದೆಯನ್ನು ‘ಬಿ’ ಗ್ರೂಪ್‍ಗೆ ಸೇರಿಸಲು ಸರ್ಕಾರ ಚಿಂತನೆ : ಎಚ್.ಕೆ.ಪಾಟೀಲ್

ಬೆಂಗಳೂರು : ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಯನ್ನು ಬಿ ಗ್ರೂಪ್ ಹುದ್ದೆಗೆ ಉನ್ನತೀಕರಿಸುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹೆಚ್.ಕೆ. ಪಾಟೀಲ್ ಅವರು ಶುಕ್ರವಾರ ವಿಧಾನ ಪರಿಷತ್‍ಗೆ ತಿಳಿಸಿದ್ದಾರೆ.

ಇಂದು ಪ್ರಶ್ನೋತ್ತರ ಅವಧಿಯಲ್ಲಿ ಎಂ.ಕೆ. ಪ್ರಾಣೇಶ್, ಕೋಟೋ ಶ್ರೀನಿವಾಸಪೂಜಾರಿ ಹಾಗೂ ಇತರ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಿಡಿಒ ಹುದ್ದೆಗಳನ್ನು ಗ್ರೂಪ್ ಬಿ ಹುದ್ದೆಗೆ ಉನ್ನತೀಕರಿಸಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲಿಂದ ಅನುಮತಿ ಸಿಕ್ಕ ಕೂಡಲೇ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

(ಎನ್‍.ಬಿ.ಎನ್)

Leave a Reply

comments

Related Articles

error: