ಮೈಸೂರು

ಕಾಂಗ್ರೆಸ್ ಹಣಬಲ ಜಾತಿಬಲದಿಂದ ಚುನಾವಣೆ ಗೆಲ್ಲುವ ಭ್ರಮೆಯಲ್ಲಿದೆ : ಯಡಿಯೂರಪ್ಪ ಟೀಕೆ

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡ್ಯೂರಪ್ಪ ಭೇಟಿ ನೀಡಿದರು. ಸುತ್ತೂರು ಶ್ರೀಗಳೊಂದಿಗೆ ಕುಶಲೋಪರಿ ಮಾತುಕತೆ ನಡೆಸಿದರು.

ಬಳಿಕ ಮಾಧ್ಯಮಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ  ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪ ಕಾಣಕೆ ವಿಚಾರಕ್ಕೆ ಸಂಬಂಧಿಸಿದಂತೆ  ಪ್ರತಿಕ್ರಿಯಿಸಿದ ಅವರು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಣ್ಣ ಬಯಲಾಗಲಿದೆ. ಡೈರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮಾಡಿರುವ ಆರೋಪ ಸತ್ಯಾಂಶದಿಂದ ಕೂಡಿದೆ.
ಇದೇ ಕಾರಣಕ್ಕಾಗಿ ಡೈರಿಯಲ್ಲಿದ್ದ ಮಾಹಿತಿ ಯಡಿಯೂರಪ್ಪಗೆ ಹೇಗೆ ಗೊತ್ತಾಯಿತು ಎಂದು ಪ್ರಶ್ನೆ ಮಾಡುತ್ತಿದ್ದಾರೆ ಎಂದರು. ವಿಧಾನಮಂಡಲದ ಅಧಿವೇಶನದಲ್ಲಿ ಪ್ರತಿಪಕ್ಷ ಬಿಜೆಪಿ ಕಲಾಪಕ್ಕೆ ಅಡ್ಡಿ ಪಡಿಸುತ್ತಿದೆ ಎಂಬ ಆರೋಪ ಬರುತ್ತಿದೆಯಲ್ಲ ಎಂಬ ಮಾತಿಗೆ ತಿರುಗೇಟು ನೀಡಿದ ಯಡಿಯೂರಪ್ಪ. ಲೋಕಸಭೆಯ ಅಧಿವೇಶನದ ವೇಳೆ ಕಾಂಗ್ರೆಸ್ ನ ಸದಸ್ಯರು ಮಾಡುತ್ತಿರುವುದೇನು  ಎಂದು ಪತ್ರಕರ್ತರಿಗೆ ಮರು ಪ್ರಶ್ನೆ ಹಾಕಿದರು.
ನಂಜನಗೂಡು ಗುಂಡ್ಲುಪೇಟೆ ಉಪಚುನಾವಣೆ ಹಿನ್ನೆಲೆಯ ಕುರಿತು ಮಾತನಾಡಿದ ಅವರು
ಗುಂಡ್ಲುಪೇಟೆ ಕ್ಷೇತ್ರದ ಮತದಾರರು ಅನುಕಂಪ ತೋರಬೇಕಿರುವುದು ಬಿಜೆಪಿ ಅಭ್ಯರ್ಥಿ ನಿರಂಜನ್ ಮೇಲೆ. ದಿವಂಗತ ಎಚ್.ಎಸ್. ಮಹದೇವ ಪ್ರಸಾದ್ ಅವರಿಗೆ 22 ವರ್ಷಗಳ ಕಾಲ ಅಧಿಕಾರ ನೀಡಿದ್ದೀರಿ. ನಿರಂಜನ್ ಎರಡು ಬಾರಿ ಸೋತಿದ್ದು,  ಅವರ ತಂದೆ ಕೂಡ ಎರಡು ಬಾರಿ ಸೋತಿದ್ದಾರೆ.  ಹೀಗಾಗಿ ನಿರಂಜನ್ ಮೇಲೆ ಅನುಕಂಪ ತೋರಿಸಿ ಮತ ಹಾಕಬೇಕಿದೆ.  ಎಂದು ಗುಂಡ್ಲುಪೇಟೆ ಕ್ಷೇತ್ರದ ಮತದಾರರಿಗೆ ಮನವಿ ಮಾಡಿದರು.
ಕಾಂಗ್ರೆಸ್ ನ ಹೆಚ್ಚು ಸಚಿವರು,ಶಾಸಕರನ್ನು ಪ್ರಚಾರಕ್ಕೆ ಕಳುಹಿಸಿದರೆ  ಬಿಜೆಪಿಗೆ ಹೆಚ್ಚು ಲಾಭವಾಗಲಿದೆ. ಕಾಂಗ್ರೆಸ್ ಎರಡೂ ಕ್ಷೇತ್ರದಲ್ಲಿ ಹಣ ಬಲ ಹಾಗೂ ಜಾತಿಬಲದಿಂದ  ಗೆಲ್ಲುವ ಭ್ರಮೆಯಲ್ಲಿದೆ.ಆದರೆ ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ  ಎಂದರು.
ಸರ್ಕಾರ ನಂಜನಗೂಡಿಗೆ 500 ಕೋಟಿಯಷ್ಟು ಅನುದಾನ ನೀಡಿದೆ.ಆದರೆ ಗುಂಡ್ಲುಪೇಟೆಗೆ ಯಾವುದೇ ಅನುದಾನ ನೀಡಿಲ್ಲ. ಇದರಲ್ಲೆ ತಿಳಿಯುತ್ತದೆ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ ಅಂತ.ಸರ್ಕಾರದ ವೈಫಲ್ಯಗಳನ್ನು ಇಟ್ಟುಕೊಂಡು ನಾವು ಚುನಾವಣೆ ಎದುರಿಸುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭ ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪ ಜೊತೆಗಿದ್ದರು. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: