ಮೈಸೂರು

ಬಜೆಟ್ ನಲ್ಲಿ ಗ್ರಾಮೀಣ ಪ್ರದೇಶವನ್ನು ಸಂಪೂರ್ಣ ಕಡೆಗಣಿಸಲಾಗಿದೆ : ವಿ.ಶ್ರೀನಿವಾಸ್ ಪ್ರಸಾದ್ ವಾಕ್ ಪ್ರಹಾರ

ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಗ್ರಾಮೀಣ ಪ್ರದೇಶವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಆಡಿದ್ದೇ ಆಡೋ ಕಿಸುಬಾಯಿ ದಾಸಯ್ಯ ಎಂಬಂತೆ ಬಜೆಟ್ ನಲ್ಲಿ ಈ ಮೊದಲಿನ ಯೋಜನೆಗಳನ್ನು ಪ್ರಸ್ತಾಪಿಸಲಾಗಿದೆ ಎಂದು ಬಿಜೆಪಿ ಮುಖಂಡ  ವಿ. ಶ್ರೀನಿವಾಸಪ್ರಸಾದ್ ಮುಖ್ಯಮಂತ್ರಿಗಳ ವಿರುದ್ಧ ವಾಕ್ ಪ್ರಹಾರ ನಡೆಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಜೆಟ್ ಕುರಿತು ಪ್ರತಿಕ್ರಿಯಿಸಿ ರೈತರ ಸಾಲಮನ್ನಾ ಮಾಡುವ ನಿರೀಕ್ಷೆ ಹುಸಿಯಾಗಿದೆ. ಇಡೀ ರಾಜ್ಯ ಭೀಕರ ಬರಗಾಲದಿಂದ ತತ್ತರಿಸಿಹೋಗಿದೆ. ಇಂತಹ ಸ್ಥಿತಿಯಲ್ಲಿ ಬೆಂಗಳೂರು ನಗರಕ್ಕೆ 198 ನಮ್ಮ ಕ್ಯಾಂಟೀನ್ ತೆರೆಯುವ ಅಗತ್ಯವೇನಿತ್ತು? ಬೆಂಗಳೂರಿಗೇನು ಬರ ಬಂದಿದೆಯಾ? ಎಂದು ಅತ್ಯಂತ ಖಾರವಾಗಿ ಪ್ರಶ್ನಿಸಿದರು

ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು 2ಕೆಜಿ ಹೆಚ್ಚಿಸಿರುವುದು, ಕ್ಷೀರ ಭಾಗ್ಯ ಯೋಜನೆಯನ್ನು ಐದು ದಿನಗಳಿಗೆ ವಿಸ್ತರಿಸಿರುವುದು, ಹೈಸ್ಕೂಲ್ ವಿದ್ಯಾರ್ಥಿನಿಯರಿಗೆ ಚೂಡಿದಾರ್ ವಿತರಣೆ ಮಾಡಲು ಮುಂದಾಗಿರುವುದೇ ಜನಪರ ಬಜೆಟ್ಟಾ ಎಂದು ಪ್ರಶ್ನಿಸಿದರಲ್ಲದೇ, ರಾಜ್ಯ ಸರ್ಕಾರ ಮೊದಲು ತನ್ನ ಪಾಲಿನ ರೈತರ ಸಾಲಮನ್ನಾ ಮಾಡಲಿ. ಆ ನಂತರ ಕೇಂದ್ರ ಸರ್ಕಾರಕ್ಕೆ ರೈತರ ಸಾಲ ಮನ್ನಾಗೆ ಆಗ್ರಹಿಸಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ಅನುದಾನವನ್ನು ಬಳಕೆ ಮಾಡಿಕೊಂಡಿರುವ ಬಗ್ಗೆ ಪ್ರಮಾಣ ಪತ್ರ ನೋಡಲಿ ಎಂದರು. ಇದೇ
ಸೋಮವಾರ ತಮ್ಮ ನಾಮಪತ್ರ ಸಲ್ಲಿಸುತ್ತೇನೆಂದು ತಿಳಿಸಿದರು. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: