ಮೈಸೂರು

ಮಾ.21: ಮಹಿಳಾ ಉದ್ಯಮಿಗಳಿಗೆ ಜಿಎಸ್ ಟಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ

ಮೈಸೂರಿನ ಜೆ.ಎಲ್.ಬಿ ರಸ್ತೆಯಲ್ಲಿರುವ  ಇಂಜಿನಿಯರುಗಳ ಸಂಸ್ಥೆಯಲ್ಲಿ ಮಾರ್ಚ್ 21ರಂದು ಮಹಿಳಾ ಉದ್ಯಮಿಗಳಿಗಾಗಿ ವಾಣಿಜ್ಯ ತೆರಿಗೆ ಇಲಾಖೆ ವತಿಯಿಂದ ಜಿಎಸ್ ಟಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳೆಯರ ಸಣ್ಣ ಉದ್ಯಮ,ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷೆ ರುಕ್ಮಿಣಿ ಚಂದ್ರನ್ ತಿಳಿಸಿದರು.

ಮೈಸೂರು ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಹ ಮಹಿಳಾ ಉದ್ಯಮಿಗಳನ್ನು ಗುರುತಿಸಿಸನ್ಮಾನ ಕಾರ್ಯಕ್ರಮವನ್ನು ನಡೆಸಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ಮಹಿಳಾ ಉದ್ಯಮಿಗಳ ವಸ್ತು ಪ್ರದರ್ಶನ ವೈಸ್-ಎಕ್ಸ್ ಕಾರ್ಯಕ್ರಮ ಆಯೋಜಿಸಲಾಗಿದೆ. ಮೂವರು ಅರ್ಹ ಮಹಿಳೆಯರನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ ಎಂದರು.

ಮಾ.21ರಂದು ಬೆಳಿಗ್ಗೆ 10ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಮೈಸೂರು ಮರ್ಚೆಂಟ್ಸ್ ಕೋಅಪರೇಟಿವ್ ಬ್ಯಾಂಕ್ ಅಧ್ಯಕ್ಷೆ ಸುಮನ ಉದ್ಘಾಟಿಸಲಿದ್ದು, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ರಾಮಕೃಷ್ಣೇಗೌಡ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಲಿನಿ ಶ್ರೀನಿವಾಸ್ ಉಪಸ್ಥಿತರಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: