
ಪ್ರಮುಖ ಸುದ್ದಿ
ಬಸ್ ಚಾಲಕ ಆತ್ಮಹತ್ಯೆಗೆ ಶರಣು
ರಾಜ್ಯ( ಮಡಿಕೇರಿ) ಏ.29 :- ಖಾಸಗಿ ಬಸ್ ಚಾಲಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೆಬ್ಬಾಲೆ ಗ್ರಾ.ಪಂ ವ್ಯಾಪ್ತಿಯ ಹಳೇಗೋಟೆ ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ದೀನೆಶ್ (35) ಎಂಬುವವರು ಇಂದು ಬೆಳಗ್ಗೆ ತಮ್ಮ ಹೊಲದ ನೇರಳೆ ಮರಕ್ಕೆ ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದು ಸಾವಿಗೆ ಶರಣಾಘಿದ್ದಾರೆ. ಹೊಲದಲ್ಲಿ ಕೆಲಸ ಮಾಡಲು ತೆರಳಿದ ಸಹೋದರ ತಿರಮಲೇಶ್ ಈ ದೃಶ್ಯವನ್ನು ಕಂಡು ತಕ್ಷಣ ಕುಶಾಲನಗರ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದರು. ಮೃತರು ತಾಯಿ, ಪತ್ನಿ ಮತ್ತು ಮೂರು ವರ್ಷದ ಮಗುವನ್ನು ಅಗಲಿದ್ದಾರೆ. (ಕೆಸಿಐ,ಎಸ್.ಎಚ್)