ಮೈಸೂರು

ನಂಜರಾಜ್ ಬಹದ್ದೂರ್ ಛತ್ರದಲ್ಲಿರುವ ನಿರಾಶ್ರಿತರಿಗೆ ಅಗತ್ಯ ವಸ್ತುಗಳ ಕಿಟ್ ವಿತರಣೆ

ಮೈಸೂರು,ಏ.29:- ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ  ಮೈಸೂರು ನಂಜರಾಜ್ ಬಹದ್ದೂರ್ ಛತ್ರದಲ್ಲಿರುವ ನಿರಾಶ್ರಿತರಿಗೆ  ಇಂದು ಮೈಸೂರು ಸೀನಿಯರ್ ಛೇಂಬರ್ ಹಾಗೂ ಜಿಲ್ಲಾ ಪತ್ರಕರ್ತರ ಸಂಘದ  ವತಿಯಿಂದ ಅಗತ್ಯ ವಸ್ತುಗಳ ಕಿಟ್ ವಿತರಿಸಲಾಯಿತು.

ಕೋವಿಡ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಆಗಿದ್ದು, ಬಡವರು ನಿರ್ಗತಿಕರಿಗೆ ಕೆಲಸವಿಲ್ಲದೆ ಅಗತ್ಯ ವಸ್ತುಗಳನ್ನು ಖರೀದಿಸುವುದು ಕಷ್ಟಕರವಾಗಿದೆ. ಪ್ರತಿದಿನ ಸಂಘಸಂಸ್ಥೆಗಳು ಊಟ ನೀಡುತ್ತಿದ್ದು, ಇಂದು ಸ್ಯಾನಿಟೈಸರ್ ಹಾಗೂ ಬಟ್ಟೆ ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡಲಾಯಿತು. ಈ ಸಂದರ್ಭ ಜಿಎಸ್ ಎಸ್ ಸಂಸ್ಥಾಪಕ ಶ್ರೀಹರಿ ಮಾತನಾಡಿ ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಲಾಕ್ ಡೌನ್ ಜಾರಿಯಾಗಿದ್ದು, ಇದರಿಂದ ಬಡವರಿಗೆ, ನಿರ್ಗತಿಕರಿಗೆ ಕೆಲಸವಿಲ್ಲದೆ ಊಟಕ್ಕೆ ತೊಂದರೆಯಾಗಿದೆ. ಅವರಿಗೆ ಊಟ, ಬಟ್ಟೆ ದಿನನಿತ್ಯದ ಅಗತ್ಯ ವಸ್ತುಗಳಿಗೆ ಕೊರತೆಯಾಗಬಾರದೆಂದು ವಿವಿಧ ಸಂಘಸಂಸ್ಥೆಗಳು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದು, ನೆರವಿಗೆ ಧಾವಿಸುತ್ತಿವೆ. ಸಂಘಸಂಸ್ಥೆಗಳ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದರು. ಇದೇ ವೇಳೆ ನಿರ್ಗತಿಕರಿಗೆ ಅಗತ್ಯ ವಸ್ತುಗಳ ಕಿಟ್ ವಿತರಿಸಿದರು.

ಈ ಸಂದರ್ಭ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: