ದೇಶಪ್ರಮುಖ ಸುದ್ದಿ

ಕೊರೊನಾ ವೈರಸ್: ದೇಶದಲ್ಲಿ ಸಾವಿನ ಸಂಖ್ಯೆ 1,007ಕ್ಕೆ ಏರಿಕೆ

ನವದೆಹಲಿ,ಏ.29-ದೇಶದಲ್ಲಿ ಕೊರೊನಾ ವೈರಸ್ (ಕೋವಿಡ್-19) ಸೋಂಕಿನಿಂದಾಗಿ ಕಳೆದ 24 ಗಂಟೆಗಳಲ್ಲಿ 73 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 1,007ಕ್ಕೆ ಏರಿಕೆಯಾಗಿದೆ.

998 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆಯಾಗಿ ದೇಶದಾದ್ಯಂತ 30,324 ಮಂದಿಗೆ ಸೋಂಕು ತಗುಲಿದೆ. ಅದರಲ್ಲಿ 7,695 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 22,629 ಸೋಂಕು ಪ್ರಕರಣಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಅತಿಹೆಚ್ಚು (8,590) ಪ್ರಕರಣಗಳು ವರದಿಯಾಗಿರುವ ಮಹಾರಾಷ್ಟ್ರದಲ್ಲಿ 389 ಜನರು ಮೃತಪಟ್ಟಿದ್ದಾರೆ. ಇಲ್ಲಿ 1,282 ಸೋಂಕಿತರು ಗುಣಮುಖರಾಗಿದ್ದಾರೆ. ಗುಜರಾತ್‌ನಲ್ಲಿ 162, ಮಧ್ಯಪ್ರದೇಶದಲ್ಲಿ 113, ದೆಹಲಿಯಲ್ಲಿ 54, ರಾಜಸ್ಥಾನದಲ್ಲಿ 41 ಮತ್ತು ಉತ್ತರ ಪ್ರದೇಶದಲ್ಲಿ 31 ಸಾವು ಸಂಭವಿಸಿವೆ.

ಕರ್ನಾಟಕದಲ್ಲಿ ಇದುವರೆಗೆ 523 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 207 ಮಂದಿ ಗುಣಮುಖರಾಗಿದ್ದಾರೆ. 20 ಮಂದಿ ಸಾವನ್ನಪ್ಪಿದ್ದಾರೆ.

ಈ ನಡುವೆ ಹೇಳಿಕೆ ನೀಡಿರುವ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು, ದ್ವಿಗುಣಗೊಳ್ಳುತ್ತಿರುವ ಸೋಂಕಿತರ ಸಂಖ್ಯೆ ಶೇ.10.9ರಷ್ಟು ಇಳಿಕೆಯಾಗಿದೆ ಎಂದು ಹೇಳಿದ್ದಾರೆ. (ಎಂ.ಎನ್)

Leave a Reply

comments

Related Articles

error: