ಪ್ರಮುಖ ಸುದ್ದಿಮೈಸೂರು

ಮನೆ ಮನೆಗೆ ವೈದ್ಯಕೀಯ ಸೇವೆ ತಲುಪಿಸುವ ಸಂಚಾರಿ ಮೊಬೈಲ್ ಕ್ಲಿನಿಕ್ ವಾಹನಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ

ಮೈಸೂರು,ಏ.29:- ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ.ಸೋಮಶೇಖರ್  ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿಂದು ಸಂಚಾರಿ ಮೊಬೈಲ್ ಕ್ಲಿನಿಕ್ ವಾಹನಗಳಿಗೆ ಚಾಲನೆ ನೀಡಿದರು.

ಇದೇ ವೇಳೆ ಮಾತನಾಡಿದ ಸಚಿವರು   ಮನೆ ಮನೆಗೆ ವೈದ್ಯಕೀಯ ಸೇವೆ ತಲುಪಿಸಲು ನೂತನ ಕೋವಿಡ್ -19 ಮೊಬೈಲ್ ಕ್ಲಿನಿಕ್ ವ್ಯವಸ್ಥೆಯನ್ನು ಹೊಂದಿರುವ ಮೊಬೈಲ್ ವ್ಯಾನ್ ಗಳ ಸೇವೆಗೆ ಚಾಲನೆ ನೀಡಲಾಗಿದೆ. ನಂಜನಗೂಡಿಗೂ ಸಹ ಈ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.   ಮೈಸೂರು ಜಿಲ್ಲೆಯನ್ನು ಕೊರೋನಾ ಮುಕ್ತ ಮಾಡಲು ಜಿಲ್ಲಾಡಳಿತ ಹಾಗೂ ವೈದ್ಯಕೀಯ ಸಿಬ್ಬಂದಿ ಉತ್ತಮ ಕಾರ್ಯವನ್ನು ಮಾಡುತ್ತಿದ್ದಾರೆ. ಅವರಿಗೆ ನನ್ನ ಹಾಗೂ ಸರ್ಕಾರದ ಪರವಾಗಿ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎ.ರಾಮದಾಸ್, ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್  ಮತ್ತಿತರರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: