ಕರ್ನಾಟಕ

ಹಳೆ ಕರೆನ್ಸಿಯನ್ನು ಹೊಸ ಕರೆನ್ಸಿ ಮಾಡಿಕೊಡುತ್ತಿದ್ದ ಆರೋಪಿಗಳ ಬಂಧನ

ಬೆಂಗಳೂರಿನ ಸಿಸಿಬಿ ಪೊಲೀಸರು ಅಶೋಕನಗರ ಪೊಲೀಸ್ ಠಾಣಾ ಸರಹದ್ದಿನ ಎಸ್.ಸ್ಟ್ರೀಟ್  ನಂಜಪ್ಪ ಸರ್ಕಲ್ ಲಾಂಗ್ ಪೋರ್ಡ್ ಲಿಂಕ್ ರಸ್ತೆ ಮನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಅಮಾನ್ಯಗೊಂಡಿರುವ 500 ಮತ್ತು 1000ರೂ.ಮುಖಬೆಲೆಯ ಹಳೆ ನೋಟುಗಳನ್ನು ಹೊಸ ಕರೆನ್ಸಿಗೆ ಬದಲಾವಣೆ ಮಾಡಿಕೊಡುವ ಪ್ರಯತ್ನದಲ್ಲಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ.

ಬಂಧಿತರನ್ನು ಆನಂದ ಜೈನ್, ವಿನಾಯಕ ಪ್ರಸಾದ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಅಮಾನ್ಯಗೊಂಡಿರುವ 50,00,000ರೂ.ಗಳನ್ನು  ಮತ್ತು ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: