ಮೈಸೂರು

ವೈದ್ಯರು ರೋಗಿಗಳ ಜತೆ ಮಾನವೀಯತೆಯಿಂದ ವರ್ತಿಸಬೇಕು : ಡಾ.ಎಸ್.ರಾಜಶೇಖರನ್

ವೈದ್ಯರು ರೋಗಿಗಳ ಜತೆ ಮಾನವೀಯತೆಯಿಂದ ವರ್ತಿಸುವ ಮೂಲಕ ಅದನ್ನು ವೃತ್ತಿ ಜೀವನದ ಒಂದು ಭಾಗವಾಗಿ ಪರಿಗಣಿಸುವುದು ಅತ್ಯಗತ್ಯ ಎಂದು ಕೊಯಮತ್ತೂರಿನ ಗಂಗಾ ಆಸ್ಪತ್ರೆಯ ಮೂಳೆ ಮತ್ತು ನರ ವಿಭಾಗದ ಅಧ್ಯಕ್ಷ ಡಾ.ಎಸ್.ರಾಜಶೇಖರನ್ ಕರೆ ನೀಡಿದರು.

ಶಿವರಾತ್ರೀಶ್ವರ ನಗರದಲ್ಲಿರುವ ಜೆಎಸ್‍ಎಸ್ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ ಪದವೀಧರರ ದಿನಾಚರಣೆ ಕಾರ್ಯಕ್ರಮದಲ್ಲಿ ನೂತನ ವೈದ್ಯಕೀಯ ಪದವೀಧರರಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು. ನೀವು ಆಯ್ಕೆ ಮಾಡಿಕೊಂಡಿರುವ ಕ್ಷೇತ್ರದ ಕಡೆ ಗಂಭೀರತೆ ಇರಬೇಕು.  ತಾಳ್ಮೆಯನ್ನು ರೂಢಿಸಿಕೊಳ್ಳಬೇಕು. ಹಣದಿಂದ ನಮ್ಮ ಒಳ್ಳೆಯ ಅಗತ್ಯಗಳನ್ನು ಪೂರೈಸಿಕೊಳ್ಳಬಹುದಷ್ಟೆ. ಆದರೆ ಹಣವೊಂದೇ ಗುರಿಯಾಗಬಾರದು ಎಂದು ಸಲಹೆ ನೀಡಿದರು.

ಒಟ್ಟು 172 ಮಂದಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪದವಿ ಪ್ರಮಾಣಪತ್ರ ವಿತರಿಸಲಾಯಿತು.

ವೇದಿಕೆಯಲ್ಲಿ ಸುತ್ತೂರು ಸಂಸ್ಥಾನ ಮಠಾಧೀಶರಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಜೆಎಸ್‍ಎಸ್ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಚ್.ಬಸವನಗೌಡಪ್ಪ, ಜೆಎಸ್‍ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜೆ.ಬೆಟಸೂರಮಠ ಮತ್ತಿತರರು ಉಪಸ್ಥಿತರಿದ್ದರು. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: