ಮೈಸೂರು

ಅಪೂರ್ವ ಸ್ನೇಹ ಬಳಗದ ವತಿಯಿಂದ ಅಸಂಘಟಿತ ವಲಯದ ನೌಕರರಿಗೆ ದಿನಸಿ ಕಿಟ್ ವಿತರಣೆ

ಮೈಸೂರು.ಮೇ.2:-   ಅಪೂರ್ವ ಸ್ನೇಹ ಬಳಗದ ವತಿಯಿಂದ ಚಾಮುಂಡಿಪುರಂ ವೃತ್ತದಲ್ಲಿ ಹೊಟೇಲಿನಲ್ಲಿ ಕೆಲಸ ಮಾಡುತ್ತಿರುವ ಅಸಂಘಟಿತ ವಲಯದ ನೌಕರರಿಗೆ ಹಾಗೂ ಪತ್ರಿಕಾ ವಿತರಕರಿಗೆ ಇಂದು  ದಿನಸಿ ಕಿಟ್ ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡುವ ಮೂಲಕ ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ನಂತರ ಮಾತನಾಡಿದ ಡಾ. ಚಂದ್ರಶೇಖರ್ ಕೂಲಿ ಕಾರ್ಮಿಕರು ಅಸಂಘಟಿತ ಕಾರ್ಮಿಕರು ಕೃಷಿಕರು ಮತ್ತು ಬಡವರು ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ ನಿಮ್ಮೊಂದಿಗೆ ನಾವು ಹಾಗೂ ಸರ್ಕಾರ ನಿಮ್ಮ ಜತೆಗಿದೆ  ಎಂದರು.

ಮಾಜಿ ನಗರ ಪಾಲಿಕೆ ಸದಸ್ಯರಾದ ಜಯಶಂಕರ್  ಸ್ವಾಮಿ ಮಾತನಾಡಿ ಕೊರೋನಾ ಸೋಂಕಿನಿಂದ ರಾಜ್ಯವೇ ತತ್ತರಿಸಿ ಲಾಕ್  ಡೌನ್ ಆಗಿರುವುದು ಬಡ ಕೂಲಿ ಕಾರ್ಮಿಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಉಳ್ಳವರು ಎಲ್ಲೆಡೆ ಹಸಿವಿನಿಂದ ಬಳಲುತ್ತಿರುವ ನಿರ್ಗತಿಕರಿಗೆ ಕೋರೂನಾ ಶಾಪವಾಗಿ ಕಾಡ ದಂತೆ  ಸಹಾಯ ಹಸ್ತ ಚಾಚುತ್ತಿರುವುದು ಶ್ಲಾಘನೀಯವಾಗಿದೆಎಂದು ಹೇಳಿದರು . ಇದೇ ಸಂದರ್ಭದಲ್ಲಿ ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್ ,ಕೃಷ್ಣರಾಜೇಂದ್ರ  ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ಬಸವರಾಜ ಬಸಪ್ಪ ,ಮುರಳಿ   ಇನ್ನಿತರರು ಹಾಜರಿದ್ದರು. (ಕೆ.ಎಸ್.ಎಸ್.ಎಚ್)

Leave a Reply

comments

Related Articles

error: