ಮೈಸೂರು

ನೌಕರರ ಸಮಸ್ಯೆ ಬಗೆಹರಿಸುವಂತೆ ಸಚಿವ ಕೆ.ಗೋಪಾಲಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ ಎಚ್.ಕೆ.ರಾಮು

ಮೈಸೂರು,ಮೇ 2-ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಚಿವ ಕೆ.ಗೋಪಾಲಯ್ಯ ಅವರಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಚ್.ಕೆ.ರಾಮು ಅವರು ಮನವಿ ಪತ್ರ ಸಲ್ಲಿಸಿದರು.

ಇಂದು ಸುತ್ತೂರು ಮಠದ ಆವರಣದಲ್ಲಿ ಸಚಿವ ಕೆ.ಗೋಪಾಲಯ್ಯ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.

ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಇಲಾಖೆಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ರಜೆ ಪಡೆಯದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಿಬ್ಬಂದಿಗಳಿಗೆ ವಾಹನ ಸೌಲಭ್ಯ ಹಾಗೂ ವಿಮಾ ಸೌಲಭ್ಯ, ರಿಸ್ಕ್ ಭತ್ಯೆ ಹಾಗೂ ಆರೋಗ್ಯ ಸುರಕ್ಷತಾ ಸಲಕರಣೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯ, ಜಿಲ್ಲಾ, ತಾಲೂಕು ಮಟ್ಟದಲ್ಲಿ ಸ್ವಂತ ಕಟ್ಟಡವಿಲ್ಲದೆ ಬಾಡಿಗೆ ಕಟ್ಟಡಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ತಮ್ಮ ಅವಧಿಯಲ್ಲಿ ಸ್ವಂತ ಕಟ್ಟಡ ವ್ಯವಸ್ಥೆ ಮಾಡಿಸಿಕೊಡಬೇಕು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯನ್ನು ತಾಲೂಕು ಹಂತದಲ್ಲಿ ಪ್ರತ್ಯೇಕಗೊಳಿಸಿ ಬೇರೆ ಇಲಾಖೆಗಳ ರೀತಿ ಸ್ವತಂತ್ರವಾಗಿ ಕೆಲಸ ನಿರ್ವಹಿಸಲು ಪ್ರಸ್ತುತವಿರುವ ಶಿರಸ್ತೆದಾರ್ ಹುದ್ದೆಯನ್ನು ಸಹಾಯಕ ನಿರ್ದೇಶಕ ಹುದ್ದೆಗೆ ಉನ್ನತೀಕರಿಸಿ ಸಹಾಯಕ ನಿರ್ದೇಶಕರ ಕಚೇರಿಯನ್ನು ಪ್ರಾರಂಭಿಸಿ ಹಾಗೂ ವೇತನ ಬಟವಾಡೆ ಅಧಿಕಾರವನ್ನು ನೀಡುವುದು ಸೇರಿದಂತೆ ಅನೇಕ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿದರು. (ಎಚ್.ಎನ್, ಎಂ.ಎನ್)

 

Leave a Reply

comments

Related Articles

error: