ಪ್ರಮುಖ ಸುದ್ದಿಮೈಸೂರು

ಕೈಗಾರಿಕೆಗಳ ಪರ ಸರ್ಕಾರ ಇದೆ : ಎಫ್ ಕೆಸಿಸಿಐ ಪದಾಧಿಕಾರಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಅಭಯ

ಮೈಸೂರು,ಮೇ.2:-  ಕೈಗಾರಿಕೆಗಳ ಸಮಸ್ಯೆಗಳ ಬಗ್ಗೆ ಸರ್ಕಾರದ ಅರಿವಿದೆ. ಕೈಗಾರಿಕಾ ಸಚಿವರು ನಿಮ್ಮ ಹಲವಾರು ಸಮಸ್ಯೆಗಳ ಬಗ್ಗೆ ಸಂಪುಟದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತಲೇ ಇದ್ದಾರೆ. ಇನ್ನು ನೀವೂ ಸಹ ನಿಮ್ಮ ಸಮಸ್ಯೆಗಳನ್ನು ನನ್ನ ಗಮನಕ್ಕೆ ತನ್ನಿ. ನಾನು ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹರಿಸಲು ಯತ್ನಿಸುತ್ತೇನೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಎಫ್ ಕೆಸಿಸಿಐ ಪದಾಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಸಚಿವರು, ಸರ್ಕಾರ ತೆಗೆದುಕೊಳ್ಳುವ ನಿರ್ಧಾರದಿಂದ ಇಡೀ ರಾಜ್ಯದ ಕೈಗಾರಿಕೆಗಳಿಗೆ ಅನುಕೂಲವಾಗಬೇಕು. ಈ ನಿಟ್ಟಿನಲ್ಲಿ ಎಲ್ಲರಿಗೂ ಸಹಕಾರಿಯಾಗುವಂತೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಸರ್ಕಾರ, ಮೈಸೂರು ಜಿಲ್ಲಾಡಳಿತ ಹಾಗೂ ಮೈಸೂರು ಉಸ್ತುವಾರಿ ಸಚಿವರು ಕೈಗಾರಿಕೆಗಳ ಪರ ಇರುವುದಾಗಿ ತಿಳಿಸಿದರು.

ಅಭಿನಂದನೆ ಸಲ್ಲಿಸುತ್ತೇನೆ

ಅದೃಷ್ಟವಶಾತ್ ಕೊರೋನಾ ನಿಯಂತ್ರಣಕ್ಕೆ ಬಂದಿದೆ. ಇದಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು, ವೈದ್ಯರು, ನರ್ಸ್ ಹಾಗೂ ಆಶಾಕಾರ್ಯಕರ್ತೆಯರು ಸಾಕಷ್ಟು ಶ್ರಮ ಹಾಕಿದ್ದಾರೆ. ಅವರ ಈ ಸೇವೆಗೆ ನಾನು ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: