ಮೈಸೂರು

ಬಿಇಎಂಎಲ್ ನಲ್ಲಿ ಚಿರತೆ ಸೆರೆ

ಬಿಇಎಂಎಲ್ ಒಳಾಂಗಣದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆಯೊಂದು ಸೆರೆಯಾಗಿದೆ.

ಮೈಸೂರಿನ ಕೈಗಾರಿಕಾ ಪ್ರದೇಶದಲ್ಲಿರುವ ಬಿಇಎಂಎಲ್ ಆವರಣದಲ್ಲಿ ಹಲವು ದಿನಗಳಿಂದ ಚಿರತೆ ಕಾಣಿಸಿಕೊಂಡಿದೆ ಎಂಬ ಮಾತು ಕೇಳಿ ಬಂದಿತ್ತು. ಈ ಕುರಿತು ಅಲ್ಲಿನ ನೌಕರರು ಅರಣ್ಯ ಇಲಾಖಾ ಸಿಬ್ಬಂದಿಗಳಿಗೆ ಮಾಹಿತಿಯನ್ನು ನೀಡಿದ್ದರು. ಕಳೆದ 15ದಿನಗಳ ಹಿಂದೆ ಅರಣ್ಯ ಇಲಾಖಾ ಸಿಬ್ಬಂದಿಗಳು ಬೋನನ್ನು ಇರಿಸಿದ್ದರು. ಭಾನುವಾರ ಬೆಳಿಗ್ಗೆ  ಒಂದೂವರೆ ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ.ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದರು. ಚಿರತೆ ಬೋನಿಗೆ ಬಿದ್ದಿರುವುದರಿಂದ ಬಿಇಎಂಎಲ್ ನೌಕರರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: