ಮೈಸೂರು

ಮಹಿಳೆ ಸಾಧನೆಯ ಹಾದಿಯಲ್ಲಿ ಚಲಿಸಿ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಾಳೆ : ರಾಜೀವ್

ಕೀರ್ತಿ ಯುವತಿ ಮಹಿಳಾ ಸಂಸ್ಥೆಯ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕವಿಗೋಷ್ಠಿಮನೆಮದ್ದು ಮತ್ತು ಆಯುರ್ವೇದ ಗಿಡಗಳ ಬಳಕೆಯ ಅರಿವು, ಪ್ರತಿಭಾ ಪುರಸ್ಕಾರ, ಹಿರಿಯ ಸಾಧಕರಿಗೆ ನಾರಿ ಶಕ್ತಿ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಾಗಿತು.

ಮೈಸೂರಿನ ಕೃಷ್ಣಮೂರ್ತಿಪುರಂನ ನಮನ ಕಲಾ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಬಿಜೆಪಿ ಮುಖಂಡ ರಾಜೀವ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಪುರುಷರಿಗಿಂತ ನಾವೇನೂ ಕಡಿಮೆ ಇಲ್ಲವೆಂಬಂತೆ ಮುನ್ನುಗ್ಗಿ ಸಾಧನೆಯ ಹಾದಿಯಲ್ಲಿ ಸಂಚರಿಸುತ್ತಿದ್ದಾಳೆ. ತನ್ನ ಸಂಸಾರದ ಜೊತೆಗೆ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಾಳೆ. ದಿನ ಮಹಿಳಾ ದಿನಾಚರಣೆಯ ಅಂಗವಾಗಿ ಹಿರಿಯ ಮಹಿಳೆಯರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಹೆಮ್ಮೆಯ ವಿಷಯ. ಮುಂದಿನ ದಿನಗಳಲ್ಲೂ ಮಹಿಳೆಯರು ಮತ್ತಷ್ಟು ಸಾಧನೆ ಮಾಡಲಿ ಎಂದು ಆಶಿಸುತ್ತೇನೆ ಎಂದರು.

ಮೃಗಾಲಯದ ಅಧ್ಯಕ್ಷೆ ಮಲ್ಲಿಗೆ ವಿರೇಶ್ ವಿದ್ಯಾರ್ಥಿಗಳಿಗೆ ಹಾಗೂ ಹಿರಿಯ ಸಾಧಕ ಮಹಿಳೆಯರನ್ನು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಕೀರ್ತಿ ಯುವತಿ ಸಂಸ್ಥೆಯ ಅಧ್ಯಕ್ಷೆ ಮಂಜುಳಾ ರಮೇಶ್, ಅಸಿಸ್ಟೆಂಟ್ ಡೈರೆಕ್ಟರ್ ಹೆಚ್.ಶ್ರೀನಿವಾಸ್, ಮತ್ತಿತರರು ಹಾಜರಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: