ಮೈಸೂರು

ನಂಜನಗೂಡಿನಲ್ಲಿ ವಲಸೆ ಕಾರ್ಮಿಕರು ಅತಂತ್ರ : ಎಲ್ಲ ರೀತಿಯ ನೆರವು ನೀಡುವುದಾಗಿ ತಹಶೀಲ್ದಾರ್ ಮಹೇಶ್ ಕುಮಾರ್ ಭರವಸೆ

ಮೈಸೂರು,ಮೇ.6:- ಕೊರೋನಾ ವೈರಸ್ ಸೋಂಕಿತ ಪ್ರದೇಶವೆಂದು ಗುರುತಿಸಿಕೊಂಡ ನಂಜನಗೂಡಿನಲ್ಲಿ ವಲಸೆ ಕಾರ್ಮಿಕರ ಗೋಳು ಹೇಳತೀರದಾಗಿದೆ. ಬಣ್ಣಾರಿ ಅಮ್ಮನ್ ಶುಗರ್ಸ್ ಕಾರ್ಖಾನೆಯ ವಲಸೆ ಕಾರ್ಮಿಕರು ಅತಂತ್ರರಾಗಿದ್ದಾರೆ. ಕಾರ್ಖಾನೆಯಿಂದ ಕಾರ್ಮಿಕರನ್ನು ಹೊರದಬ್ಬಲಾಗಿದೆ.

ಸುಮಾರು 350ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಅತಂತ್ರರಾಗಿದ್ದಾರೆ. ನಂಜನಗೂಡು ತಾಲೂಕಿನ ಮಲ್ಲುಪುರ ಗ್ರಾಮದಲ್ಲಿರುವ ಬಣ್ಣಾರಿ ಅಮ್ಮನ್ ಶುಗರ್ಸ್ ಕಾರ್ಖಾನೆಯ ಕಾರ್ಮಿಕರು ಇದೀಗ ತಹಶೀಲ್ದಾರ್ ಮಹೇಶ್ ಕುಮಾರ್ ಮೊರೆ ಹೋಗಿದ್ದಾರೆ. ಮಿನಿವಿಧಾನಸೌಧ ದಲ್ಲಿರುವ ತಹಶೀಲ್ದಾರ್ ಕಚೇರಿಗೆ ಸುಮಾರು ಐದಾರು ಕಿಲೋಮೀಟರ್ ನಡೆದುಕೊಂಡೇ ಬಂದು ತಮ್ಮ‌ ಅಹವಾಲನ್ನ ಹೇಳಿಕೊಂಡಿದ್ದಾರೆ. ಕಾರ್ಖಾನೆಯ ಮಾಲೀಕರು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯ ಕ್ಕೆ ವಲಸೆ ಕಾರ್ಮಿಕರು ಬೀದಿಗೆ ಬಿದ್ದಂತಾಗಿದೆ. ಬಿಹಾರ ಮತ್ತು ಉತ್ತರ ಪ್ರದೇಶ ಮೂಲದ ಕಾರ್ಮಿಕರೆಂದು ಹೇಳಲಾಗಿದೆ. ಒಂದು ತಿಂಗಳಿಂದ ಆಹಾರ ಪದಾರ್ಥ ನೀಡುತ್ತಿಲ್ಲ. ಹಸಿವಿನಿಂದಲೇ ದಿನ ದೂಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಹಶೀಲ್ದಾರ್ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಸಂಬಳದ ಬಾಕಿ ಹಣ ಕೊಡಿಸುವಂತೆ ಮನವಿ ಸಲ್ಲಿಸಿದ್ದಾರೆ. ಇತ್ತ ಸಂಬಳವೂ ಇಲ್ಲ, ಆಹಾರವನ್ನು ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ತಮಿಳುನಾಡು ಮೂಲದ ಚೆಟ್ಟಿನಾಡು ಗುತ್ತಿಗೆ ಸಂಸ್ಥೆಯಿಂದ ಕೆಲಸ ನಿರ್ವಹಿಸುತ್ತಿರುವ ವಲಸೆ ಕಾರ್ಮಿಕರಿವರಾಗಿದ್ದು, ಒಂದು ತಿಂಗಳಿಂದ ಗುತ್ತಿಗೆದಾರರು ನಾಪತ್ತೆಯಾಗಿದ್ದಾರೆಂದು ದೂರಿದ್ದಾರೆ. ಸಹಾಯ ಹಸ್ತಕ್ಕಾಗಿ ಮನವಿ ಮಾಡಿದ ಕಾರ್ಮಿಕರಿಗೆ ತಹಶೀಲ್ದಾರ್ ಮಹೇಶ್ ಕುಮಾರ್ ಎಲ್ಲ ರೀತಿಯ ನೆರವು ನೀಡುವ ಭರವಸೆ ನೀಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: