ಮೈಸೂರು

ಬಾಳೆತೋಟದಲ್ಲಿ ಹುಲಿ ಪ್ರತ್ಯಕ್ಷ

ಎಚ್.ಡಿ.ಕೋಟೆ ತಾಲೂಕಿನ  ನಾಗನಹಳ್ಳಿ ಹೆಗ್ಗಡಾಪುರ ಹೊರವಲಯದ ಬಾಳೆ ತೋಟದಲ್ಲಿ ಹುಲಿ ಪ್ರತ್ಯಕ್ಷಗೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ ಘಟನೆ ನಡೆದಿದೆ.
ಮೈಸೂರಿನ ನಾಗನಹಳ್ಳಿ ಹೆಗ್ಗಡಾಪುರ ಹೊರವಲಯದಲ್ಲಿ ಹುಲಿ ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿತ್ತು. ಅಂಥೋಣಿಯವರ ಬಾಳೆ ತೋಟದಲ್ಲಿ ಹುಲಿ ಆಶ್ರಯ ಪಡೆದಿದ್ದು, ಅರಣ್ಯ ಇಲಾಖಾ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಹುಲಿಯನ್ನು ಸೆರೆ ಹಿಡಿಯಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹುಲಿ ಇಬ್ಬರು ಯುವಕರ ಮೇಲೆ ದಾಳಿ ನಡೆಸಿದ್ದು, ಅವರಿಗೆ  ಗಾಯ ಮಾಡಿದೆ ಎನ್ನಲಾಗಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: