
ಮೈಸೂರು
ಡಿ.ಸೋಮಶೇಖರ್ ನಿಧನ ಹಿನ್ನೆಲೆ : ಅಂಬೇಡ್ಕರ್ ಸಮುದಾಯ ಭವನದಲ್ಲಿ ಶ್ರದ್ಧಾಂಜಲಿ ಅರ್ಪಣೆ
ಮೈಸೂರು,ಮೇ.6:- ಮಾಜಿ ನಗರ ಪಾಲಿಕೆ ಸದಸ್ಯರಾದ ದಾಸೇಗೌಡರ ಮಗ ವಕೀಲರಾಗಿದ್ದ ಡಿ.ಸೋಮಶೇಖರ್ ಅವರು ಅಗಲಿದ ಹಿನ್ನೆಲೆಯಲ್ಲಿ ಇಂದು ನಗರದ ಕುಕ್ಕರಹಳ್ಳಿ ಕೆರೆಯ ಅಂಬೇಡ್ಕರ್ ಸಮುದಾಯ ಭವನದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಡ್ಡೀಕೆರೆ ಗೋಪಾಲ್ ಶಾರದಾ ವಿಲಾಸ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಯಾಗಿದ್ದ ಸೋಮಶೇಖರ್ ಅವರು ವಿದ್ಯಾರ್ಥಿಗಳನ್ನು ಸಂಘಟಿಸುವಲ್ಲಿ ಬಹಳ ಮುಂದಾಳತ್ವ ಹೊಂದಿದ್ದರು
ಎರಡು ದಶಕದ ಹಿಂದೆ ಶಾರದಾ ವಿಲಾಸ ಕಾನೂನು ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಗಳು ಒಂದು ವಿಷಯ ಉಳಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಸುಮಾರು 500 ಮಂದಿ ವಿದ್ಯಾರ್ಥಿಗಳು ಮುಂದೆ ಪರೀಕ್ಷೆ ಬರೆಯಲು ಅವಕಾಶ ನೀಡುತ್ತಿರಲಿಲ್ಲ. ಈ ಸಂದರ್ಭದಲ್ಲಿ ಸೋಮಶೇಖರ್ ಅವರು ಮುಂದಾಳತ್ವ ವಹಿಸಿಕೊಂಡರು. ಅವರ ಹೋರಾಟಕ್ಕೆ ಎಲ್ಲರೂ ಕೈ ಜೋಡಿಸಿದರು. ನಿರಂತರ ಎರಡು ದಿನ ಹೋರಾಟ ಮಾಡಿ 500 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿ ಕೊಟ್ಟಿದ್ದರು ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾದ ಅರವಿಂದ್ ಶರ್ಮ, ಅಮೋಘ ನಾಗರಾಜ್ , ಕನ್ನಡ ಹೋರಾಟಗಾರ ಬೋಗಾ ನಂದೀಶ್ ಇತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)