ಪ್ರಮುಖ ಸುದ್ದಿಮೈಸೂರು

ಮೈಸೂರು ಮೃಗಾಲಯಕ್ಕೆ  21.14 ಲಕ್ಷ ರೂಪಾಯಿ ಚೆಕ್ ನೀಡಿದ ಸಚಿವ ಎಸ್.ಟಿ.ಸೋಮಶೇಖರ್ : ಮೃಗಾಲಯಕ್ಕೆ ಇಂದು ಒಟ್ಟು 1.5 ಕೋಟಿ ರೂ. ದೇಣಿಗೆ

ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು 84 ಲಕ್ಷ ರೂಪಾಯಿ ಚೆಕ್ ಹಸ್ತಾಂತರ

ಮೈಸೂರು, ಮೇ.7:-  ಮೈಸೂರು ಜಯಚಾಮರಾಜೇಂದ್ರ ಮೃಗಾಲಯದ ನಿರ್ವಹಣೆಗೋಸ್ಕರ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು 3ನೇ ಹಂತವಾಗಿ ಇಂದು 21.14 ಲಕ್ಷ ರೂಪಾಯಿ ಚೆಕ್ ಅನ್ನು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಅವರಿಗೆ ಹಸ್ತಾಂತರಿಸಿದರು.

ಇದೇ ವೇಳೆ, ನಗರಾಭಿವೃದ್ಧಿ ಸಚಿವರಾದ ಬಿ.ಎ. ಬಸವರಾಜು ಅವರು 84 ಲಕ್ಷ ರೂಪಾಯಿ ಚೆಕ್ ಅನ್ನು ಸಚಿವ ಸೋಮಶೇಖರ್ ಅವರ ಮೂಲಕ ಮೃಗಾಲಯಕ್ಕೆ ಹಸ್ತಾಂತರಿಸಿದರು.

ಈ ಮೂಲಕ ಗುರುವಾರ ಒಂದೇ ದಿನ ಮೃಗಾಲಯಕ್ಕೆ ಒಟ್ಟಾರೆ 1,05,14,000 ರೂಪಾಯಿಯನ್ನು ದೇಣಿಗೆಯಾಗಿ ನೀಡಿದಂತಾಗಿದೆ.

ಒಟ್ಟಾರೆ 2.32 ಕೋಟಿ ರೂ. ಕೊಡುಗೆ

ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರು ಇದುವರೆಗೆ ತಮ್ಮ ಕ್ಷೇತ್ರ ಹಾಗೂ ಇತರ ಸಚಿವರಿಂದ ಮೃಗಾಲಯಕ್ಕೆ ಒಟ್ಟಾರೆಯಾಗಿ 2,31,60,000 ರೂಪಾಯಿಯನ್ನು ದೇಣಿಗೆಯಾಗಿ ನೀಡಿದಂತಾಗಿದೆ.

ಈ ಸಂದರ್ಭ ಶಾಸಕರಾದ ಎಲ್.ನಾಗೇಂದ್ರ, ಎಸ್.ಎ.ರಾಮದಾಸ್, ಸಂಸದ ಪ್ರತಾಪ್ ಸಿಂಹ ,ಮೃಗಾಲಯ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

 

 

Leave a Reply

comments

Related Articles

error: