ಪ್ರಮುಖ ಸುದ್ದಿಮೈಸೂರು

ನಗರ ಪ್ರದೇಶದಲ್ಲಿ ನೀರಿನ ಕಂದಾಯ ಪಾವತಿಗೆ ಯಾವುದೇ ಒತ್ತಡ ಹೇರುವುದಿಲ್ಲ : ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್ ಸ್ಪಷ್ಟನೆ

ಮೈಸೂರು,ಮೇ.7:- ನಗರ ಪ್ರದೇಶದಲ್ಲಿ ನೀರಿನ ಕಂದಾಯ ಪಾವತಿಗೆ ಯಾವುದೇ ಒತ್ತಡ ಹೇರುವುದಿಲ್ಲ. ಮೂರು ತಿಂಗಳು ಸಮಯ ನೀಡಿದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್ ಸ್ಪಷ್ಟಪಡಿಸಿದರು.

ಅವರಿಂದು ಮೈಸೂರು ನಗರ ಪಾಲಿಕೆಯಲ್ಲಿ  ನಡೆದ ಸಚಿವರು ಮತ್ತು ಅಧಿಕಾರಿಗಳ ಸಭೆಯ  ಬಳಿಕ ಮಾಧ್ಯಮದವರ ಜತೆ ಮಾತನಾಡಿದರು.

ದೇಶದಲ್ಲೇ ಲಾಕ್ ಡೌನ್ ಇದೆ. ಆದ್ದರಿಂದ ನಾವೀಗ ಜನತೆಯನ್ನು ಕಂದಾಯ ಪಾವತಿಸಿ ಎಂದು ಕೇಳಲಿಕ್ಕಾಗಲ್ಲ. ಜತೆಗೆ ಈಗ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಆದ್ದರಿಂದ ಈ ಸಂದರ್ಭದಲ್ಲಿ ನಾವು ಜನರನ್ನು ಒತ್ತಾಯ ಮಾಡಲಾಗದು. ಅದಕ್ಕಾಗಿ ನೀರಿನ ಬಿಲ್ ಪಾವತಿಗೆ ಮೂರು ತಿಂಗಳು ಕಾಲಾವಕಾಶ ನೀಡಲಾಗಿದೆ ಎಂದರು.

ಇಂದಿನ ಸಭೆಯಲ್ಲಿ ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಪ್ರಮುಖವಾಗಿ ನೀರಿನ ಸಮಸ್ಯೆ ಬಗ್ಗೆ ತಿಳಿಸಿದ್ದಾರೆ. ನಾನು ಈ ವಿಚಾರವನ್ನು ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ. ಮೈಸೂರು ವಿಶಾಲವಾದ ನಗರ. ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು. ನಾನು ಮತ್ತೊಮ್ಮೆ ಬರುತ್ತೇನೆ‌. ಆಗ ಸಂಪೂರ್ಣವಾಗಿ ಮತ್ತಷ್ಟು ವಿಷಯಗಳ ಬಗ್ಗೆ ಚರ್ಚೆ ಮಾಡುತ್ತೇನೆ. ಯಾವುದೆ ಸಮಸ್ಯೆಗಳು ಉಂಟಾಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು.

ಅಕ್ರಮ ಸಕ್ರಮ ಯೋಜನೆ ಜಾರಿ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ ಅಕ್ರಮ ಸಕ್ರಮ ಯೋಜನೆ ಜಾರಿ ಸಂಬಂಧ ಸಿಎಂ ಇದರ ಬಗ್ಗೆ ಆಲೋಚನೆ ಮಾಡುತ್ತಿದ್ದಾರೆ‌. ಹೇಗೆ,ಯಾವ ರೀತಿ ಜಾರಿ ಮಾಡಬೇಕು ಎಂಬುದರ ಬಗ್ಗೆ ಸಿಎಂ ಕೆಲವೇ ದಿನಗಳಲ್ಲಿ ತಿಳಿಸುತ್ತಾರೆ‌. ನಾವು ಸಹ ಸಿಎಂಗೆ ಇದರ ಬಗ್ಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: