ಮೈಸೂರು

ಸಮರ್ಥನಂ ಅಂಗವಿಕಲರ ಸಂಸ್ಥೆಯಿಂದ 15 ಲಕ್ಷ ರೂ. ಮೌಲ್ಯದ ವೈದ್ಯಕೀಯ ರಕ್ಷಾ ಕವಚ ಹಸ್ತಾಂತರ

ಮೈಸೂರು,ಮೇ 8-ಸಮರ್ಥನಂ ಅಂಗವಿಕಲರ ಸಂಸ್ಥೆಯವರು ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಬೇಕಾದ ರಕ್ಷಾ ಕವಚಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಹಸ್ತಾಂತರಿಸಿದರು.

ಇಂದು ನಗರದ ಮೆಡಿಕಲ್ ಕಾಲೇಜಿನಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆಯ ಸಂಸ್ಥಾಪಕ ಟ್ರಸ್ಟಿ ಜಿ.ಕೆ.ಮಹಂತೇಶ್ ಅವರು ಅಗತ್ಯ ವೈದ್ಯಕೀಯ ರಕ್ಷಾ ಕವಚಗಳನ್ನು ಸೋಮಶೇಖರ್ ಅವರಿಗೆ ಹಸ್ತಾಂತರಿಸಿದರು.

15 ಲಕ್ಷ ರೂ. ಮೌಲ್ಯದ ಪಿಪಿಇ ಕಿಟ್, ಎನ್ 95 ಮಾಸ್ಕ್, ಹ್ಯಾಂಡ್ ಗ್ಲೌಸ್, ಸ್ಯಾನಿಟೈಸರ್ ಒಳಗೊಂಡ 400 ಕಿಟ್ ಗಳನ್ನು ನೀಡಲಾಗಿದೆ. ಅದರಲ್ಲಿ 300 ಕಿಟ್ ಗಳು ಕೆ.ಆರ್.ಆಸ್ಪತ್ರೆ ಹಾಗೂ 100 ಕಿಟ್ ಜಯದೇವ ಆಸ್ಪತ್ರೆಗೆ ನೀಡಲಾಗಿದೆ.

ಬೆಂಗಳೂರಿನ ಸಿ.ವಿ.ರಾಮನ್ ಆಸ್ಪತ್ರೆ, ರಾಜೀವ್ ಗಾಂಧಿ ಆಸ್ಪತ್ರೆ, ಮೈಸೂರಿನ ಕೆ.ಆರ್.ಆಸ್ಪತ್ರೆ, ಜಯದೇವ ಆಸ್ಪತ್ರೆಗಳಿಗೆ ಕಳುಹಿಸಿ ಕೊಟ್ಟಿರುವ ಕಿಟ್ ಸೇರಿ ಸುಮಾರು 1 ಕೋಟಿ ರೂ. ಮೌಲ್ಯದ ರಕ್ಷಾ ಕವಚಗಳನ್ನು ಸಂಸ್ಥೆಯಿಂದ ನೀಡಲಾಗಿದೆ.

ಈ ಸಂದರ್ಭದಲ್ಲಿ ಸಂಸದ ಪ್ರತಾಪಸಿಂಹ, ಶಾಸಕ ಎಲ್.ನಾಗೇಂದ್ರ, ಬಿಜೆಪಿ ಮುಖಂಡ ಎಚ್.ವಿ.ರಾಜೀವ್, ಸಮರ್ಥನಂ ಅಂಗವಿಕಲರ ಸಂಸ್ಥೆಯ ಟ್ರಸ್ಟಿ ವಸಂತಿ ಸಾವಣ್ಣವರ್, ಮುಖ್ಯಸ್ಥ ದೇವರಾಜ್, ಮೈಸೂರು ವಿಭಾಗದ ಕಾರ್ಯಕ್ರಮ ಸಂಯೋಜಕ ಶಿವರಾಜ್ ಉಪಸ್ಥಿತರಿದ್ದರು. (ಎಚ್.ಎನ್, ಎಂ.ಎನ್)

Leave a Reply

comments

Related Articles

error: