ಮೈಸೂರು

ಉಮೇದುವಾರಿಕೆ ಸಲ್ಲಿಸಲಿರುವ ಅಭ್ಯರ್ಥಿಗಳು

ಗುಂಡ್ಲುಪೇಟೆ ನಂಜನಗೂಡು ಉಪಚುನಾವಣಾ ಕಣಾ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಮುಖಂಡರು ನಗರದಲ್ಲಿ ಬೀಡು ಬಿಟ್ಟಿದ್ದಾರೆ. ಸೋಮವಾರ ಗುಂಡ್ಲುಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಡಾ.ಗೀತಾ ಮಹದೇವಪ್ರಸಾದ್, ಹಾಗೂ ಬಿಜೆಪಿ ಅಭ್ಯರ್ಥಿ ನಿರಂಜನ್ ಕುಮಾರ್, ನಂಜನಗೂಡು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಗುಂಡ್ಲುಪೇಟೆ ಚುನಾವಣಾಧಿಕಾರಿಗಳ ಬಳಿ ಸಚಿವ ಯು.ಟಿ.ಖಾದರ್ ಹಾಗೂ ಸಂಸದ ಧ್ರುವ ನಾರಾಯಣ್ ನೇತೃತ್ವದಲ್ಲಿ ತೆರಳಿ ಡಾ.ಗೀತಾ ಮಹದೇವಪ್ರಸಾದ್ ನಾಮಪತ್ರ ಸಲ್ಲಿಸಲಿದ್ದಾರೆ. ನಂಜನಗೂಡು ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್ ಯಡಿಯೂರಪ್ಪ ಮತ್ತಿತರ ನಾಯಕರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: