ಮೈಸೂರು

ಕಾನೂನು ವಿಭಾಗದ ವಿದ್ಯಾರ್ಥಿ ಮೇಲೆ ಹಲ್ಲೆ ವಿರೋಧಿಸಿ ಪ್ರತಿಭಟನೆ

ಕಾನೂನು ವಿಭಾಗದ  ದಲಿತ ವಿದ್ಯಾರ್ಥಿ  ದುರ್ಗಾಪ್ರಸಾದ್ ಟಿ.ಎಂ ಮೇಲೆ ಶಿಕ್ಷಣ ವಿಭಾಗದ ಗುಮಾಸ್ತ ಲೋಕೇಶ್ ಹಲ್ಲೆ ಮಾಡಿರುವುದನ್ನು ಖಂಡಿಸಿ ಸುವರ್ಣ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರು ವಿಶ್ವವಿದ್ಯಾಲಯದ ಕಾರ್ಯಸೌಧದ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ವಿದ್ಯಾರ್ಥಿ ಆವರಣದಲ್ಲಿ ಒಂಟಿಯಾಗಿ ಇರುವುದನ್ನು ಗಮನಿಸಿ ವಿದ್ಯಾರ್ಥಿ ಮೇಲೆ ಏಕಾಏಕಿ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಅರೆಕಾಲಿಕ ಗುಮಾಸ್ತ ಲೋಕೇಶ್ ಅವರನ್ನು ಈ ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಉಪಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರು ವಿದ್ಯಾರ್ಥಿಗೆ ನ್ಯಾಯ ಒದಗಿಸಿಕೊಡಬೇಕು. ಸರಿಯಾದ ಸೂಕ್ತಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆಯನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಎಂ.ಲಿಂಗರಾಜು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: