ದೇಶಪ್ರಮುಖ ಸುದ್ದಿ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಉತ್ತರ ಪ್ರದೇಶ ವಲಸೆ ಕಾರ್ಮಿಕರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

ಲಕ್ನೋ,ಮೇ 14-ಮಧ್ಯ ಪ್ರದೇಶದ ಗುನಾದಲ್ಲಿ ಕಳೆದ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವಲಸೆ ಕಾರ್ಮಿಕರ ಕುಟುಂಬಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ತಲಾ 2 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

ಮೃತ ಕಾರ್ಮಿಕರು ಉತ್ತರ ಪ್ರದೇಶ ಮೂಲದವರಾಗಿದ್ದು, ಅವರ ದೇಹಗಳನ್ನು ಕುಟುಂಬಸ್ಥರ ಬಳಿ ತರಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.

ಕಳೆದ ರಾತ್ರಿ ಪ್ರತ್ಯೇಕ ಅಪಘಾತದಲ್ಲಿ ಮೃತಪಟ್ಟ ಕಾರ್ಮಿಕರಲ್ಲಿ ಮುಜಾಫರ್ ನಗರದಲ್ಲಿ ಮೃತಪಟ್ಟವರು ಬಿಹಾರ ಮೂಲದವರಾಗಿದ್ದಾರೆ. ಇವರ ಕುಟುಂಬಸ್ಥರು, ಎಲ್ಲಿಂದ ಎಲ್ಲಿಗೆ ಹೋಗುತ್ತಿದ್ದರು ಎಂಬ ವಿವರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. (ಎಂ.ಎನ್)

Leave a Reply

comments

Related Articles

error: