ದೇಶಪ್ರಮುಖ ಸುದ್ದಿ

ದೇಶದಲ್ಲಿ ಒಂದೇ ದಿನ 3970 ಮಂದಿಯಲ್ಲಿ ಕೊರೊನಾ ದೃಢ: 85 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ

ನವದೆಹಲಿ,ಮೇ 16- ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3970 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರಿಂದ ದೇಶದಲ್ಲಿ ಸೋಂಕಿತರ ಸಂಖ್ಯೆ 85 ಸಾವಿರ ಗಡಿದಾಟಿದೆ.

ಭಾರತದಲ್ಲಿ ಶುಕ್ರವಾರ 3970 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 85, 940ಕ್ಕೆ ಏರಿಕೆಯಾಗಿದೆ. 103 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 2752ಕ್ಕೆ ಏರಿಕೆಯಾಗಿದೆ. 30153 ಮಂದಿ ಗುಣಮುಖರಾಗಿದ್ದಾರೆ. 53035 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಮಹಾರಾಷ್ಟ್ರದಲ್ಲಿ 29100 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 1068 ಮಂದಿ ಮೃತಪಟ್ಟಿದ್ದು, 6564 ಮಂದಿ ಗುಣಮುಖರಾಗಿದ್ದಾರೆ. ದೆಹಲಿಯಲ್ಲಿ 8895 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ 123 ಮಂದಿ ಮೃತಪಟ್ಟಿದ್ದು, 3518 ಮಂದಿ ಗುಣಮುಖರಾಗಿದ್ದಾರೆ. ತಮಿಳುನಾಡಿನಲ್ಲಿ 10108 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ 71 ಮಂದಿ ಮೃತಪಟ್ಟಿದ್ದು, 2599 ಮಂದಿ ಗುಣಮುಖರಾಗಿದ್ದಾರೆ. ಗುಜರಾತ್ ನಲ್ಲಿ 9931 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 606 ಮಂದಿ ಮೃತಪಟ್ಟಿದ್ದಾರೆ. 4035 ಮಂದಿ ಗುಣಮುಖರಾಗಿದ್ದಾರೆ.

ವಿಶ್ವದಲ್ಲಿಯೇ ಮೊದಲ ಬಾರಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಚೀನಾವನ್ನು ಭಾರತ ಹಿಂದಿಕ್ಕಿದೆ. ಈ ನಡುವೆ ಮೃತರ ಸಂಖ್ಯೆಯಲ್ಲಿ ಭಾರತ ಚೀನಾ ಮಟ್ಟಕ್ಕೆ ತಲುಪಿಲ್ಲ ಎಂಬುದು ತುಸು ಸಮಾಧಾನಕರ ವಿಚಾರವಾಗಿದೆ. ಈ ಹಂತದಲ್ಲಿ ಚೀನಾದಲ್ಲಿ ಸಾವಿನ ಸಂಖ್ಯೆ ಶೇ. 5.5ರಷ್ಟಿತ್ತು. ಆದರೆ, ಭಾರತದಲ್ಲಿ ಶೇ.3.2ರಷ್ಟಿದೆ.

ಭಾರತ ಚೀನಾವನ್ನು ಹಿಂದಿಕ್ಕಿರುವುದರ ಜೊತೆಗೆ ಅತೀ ಹೆಚ್ಚು ಸೋಂಕಿತರು ಇರುವ ವಿಶ್ವದ ದೇಶಗಳ ಪೈಕಿ 11ನೇ ಸ್ಥಾನಕ್ಕೂ ಏರಿದೆ. ಪ್ರಸ್ತುತ 1.16 ಲಕ್ಷ ಸೋಂಕಿತರೊಂದಿಗೆ ಇರಾನ್ 10ನೇ ಸ್ಥಾನದಲ್ಲಿದೆ. ಇದೇ ಪ್ರಮಾಣದಲ್ಲಿ ಸೋಂಕಿತರು ಪ್ರತಿನಿತ್ಯ ಪತ್ತೆಯಾಗುತ್ತಾ ಹೋದರೆ, ಇರಾನ್ ದೇಶವನ್ನೂ ಭಾರತ ಹಿಂದಿಕ್ಕುವ ದಿನಗಳು ತೀರಾ ದೂರವೇನೂ ಇಲ್ಲ. (ಎಂ.ಎನ್)

 

Leave a Reply

comments

Related Articles

error: