ದೇಶಪ್ರಮುಖ ಸುದ್ದಿ

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ: ವಲಸೆ ಕಾರ್ಮಿಕರ ಸಾವು; ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಲಕ್ನೋ,ಮೇ 16-ಉತ್ತರ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 24 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಉತ್ತರ ಪ್ರದೇಶ ರಸ್ತೆ ಅಪಘಾತ ದುರಂತವು ತುಂಬಾನೇ ದುಃಖವನ್ನುಂಟು ಮಾಡಿದೆ. ಪರಿಹಾರ ಕಾರ್ಯಗಳಲ್ಲಿ ಸರ್ಕಾರ ನಿರತವಾಗಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪವನ್ನು ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗನೇ ಗುಣಮುಖರಾಗಲು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ವಲಸೆ ಕಾರ್ಮಿಕರಿದ್ದ ಟ್ರಕ್ ಔರೈಯಾ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿ 24 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. 22 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 15 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.

ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿ ವಲಸೆ ಕಾರ್ಮಿಕರು ಅತಿ ಹೆಚ್ಚಿನ ತೊಂದರೆಯನ್ನು ಎದುರಿಸುತ್ತಿದ್ದಾರೆ. ಮೂರನೇ ಹಂತದ ಲಾಕ್‌ಡೌನ್ ಜಾರಿಯಲ್ಲಿರುವಂತೆಯೇ ಕೆಲಸ ಕಳೆದುಕೊಂಡ ಕಾರ್ಮಿಕರು ತವರಿಗೆ ವಾಪಸ್ಸಾಗಲು ಪ್ರಯತ್ನಿಸುತ್ತಿದ್ದರು. (ಎಂ.ಎನ್)

Leave a Reply

comments

Related Articles

error: