ಮೈಸೂರು

ವಿಚಾರಣಾಧೀನ ಖೈದಿ ಸಾವು

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ  ವಿಚಾರಣಾಧೀನ ಖೈದಿಯೋರ್ವ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೃತ ಕೈದಿಯನ್ನು ಕುಮಾರ್ (49) ಎಂದು ಗುರುತಿಸಲಾಗಿದೆ. ಈತ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ನಡೆದ ಕೊಲೆ ಕೇಸಿಗೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ನ್ಯಾಯಾಂಗ ಬಂಧನದಲ್ಲಿದ್ದ ಎನ್ನಲಾಗಿದೆ. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಈತನ ಸಮಸ್ಯೆ ಕಳೆದ ರಾತ್ರಿ ಉಲ್ಬಣಿಸಿದ ಪರಿಣಾಮ ಜೈಲಿನಲ್ಲೇ ಸಾವನ್ನಪ್ಪಿದ್ದಾನೆ. ಈ ಕುರಿತು ಮಂಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೃತ ಶರೀರವನ್ನು ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: