ಪ್ರಮುಖ ಸುದ್ದಿ

ಜೂನ್ 25ರಿಂದ ಜುಲೈ 4ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ; ಜೂ.18ಕ್ಕೆ ಪಿಯುಸಿ ಇಂಗ್ಲೀಷ್ ಪರೀಕ್ಷೆ ಸಚಿವ ಸುರೇಶ್ ಕುಮಾರ್ ಮಾಹಿತಿ

ರಾಜ್ಯ(ಬೆಂಗಳೂರು)ಮೇ.18:-  ಕೊರೋನಾ ಮಹಾಮಾರಿ ರಾಜ್ಯದಲ್ಲಿ ತನ್ನ ಪ್ರಭಾವ ಬೀರಿದ್ದ ಹಿನ್ನೆಲೆಯಲ್ಲಿ  ಕರ್ನಾಟಕದಲ್ಲಿ ಯೂ ಲಾಕ್​ಡೌನ್​ ಘೋಷಿಸಿದ್ದರಿಂದ ಪಿಯುಸಿ, ಎಸ್​ಎಸ್​ಎಲ್​ಸಿ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್​ ಎಸ್​ಎಸ್ಎಲ್​ಸಿ ಪರೀಕ್ಷೆಯ ದಿನಾಂಕವನ್ನು ಘೋಷಿಸಿದ್ದು, ಜೂನ್ 25ರಿಂದ ಜುಲೈ 4ರವರೆಗೆ 10ನೇ ತರಗತಿ ಪರೀಕ್ಷೆಗಳು ನಡೆಯಲಿವೆ.   ಜೂನ್ 18ಕ್ಕೆ  ಪಿಯುಸಿ ವಿದ್ಯಾರ್ಥಿಗಳಿಗೆ ಉಳಿದುಕೊಂಡಿದ್ದ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರಶ್ ಕುಮಾರ್ ಮಾಹಿತಿ ನೀಡಿದರು.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು  ಈಗಾಗಲೇ ಚಂದನ ವಾಹಿನಿಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಪುನರ್ಮನನ ಆರಂಭಿಸಲಾಗಿದೆ. ಇಂಗ್ಲಿಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನ ಅಂತರವನ್ನು ನೀಡಲಾಗಿದೆ. ಸದ್ಯದಲ್ಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ 1 ತಿಂಗಳು ಮುಂಚಿತವಾಗಿ ಪರೀಕ್ಷೆ ದಿನಾಂಕವನ್ನು ಘೋಷಿಸಲಾಗಿದೆ ಎಂದು   ತಿಳಿಸಿದ್ದಾರೆ. ಜುಲೈ 4ಕ್ಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಮುಗಿಯಲಿದ್ದು, ಮೌಲ್ಯಮಾಪನಕ್ಕೆ 1 ತಿಂಗಳು ಬೇಕಾಗಲಿದೆ. ನಂತರ ಪೂರಕ ಪರೀಕ್ಷೆ ನಡೆಸಲಾಗುವುದು. ಶಾಲೆಗಳ ಪ್ರಾರಂಭದ ಬಗ್ಗೆ ಚರ್ಚೆ ನಡೆಯುತ್ತಿದೆ. ಪರೀಕ್ಷೆ ನಡೆಯುವ ಶಾಲೆಗಳ ಕೊಠಡಿಗಳನ್ನು ಸ್ಯಾನಿಟೈಸ್ಡ್ ಮಾಡಲಾಗುವುದು ಎಂದು   ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: