ಮೈಸೂರು

ಕಪ್ಪ ಕಾಣಿಕೆ ಆರೋಪ ವಿಚಾರ ನೂರಕ್ಕೆ ನೂರು ಸತ್ಯ : ಯಡಿಯೂರಪ್ಪ

ಕಾಂಗ್ರೆಸ್ ಹೈಕಮಾಂಡ್ ಗೆ ರಾಜ್ಯದ ಸಚಿವರು ನೂರಾರು ಕೋಟಿ ರೂಪಾಯಿ ಕಪ್ಪ ಕಾಣಿಕೆ ನೀಡಿರುವುದಾಗಿ ನಾನು ಮಾಡಿರುವ ಆರೋಪ ನೂರಕ್ಕೆ ನೂರರಷ್ಟು ಸತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ನುಡಿದಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಗೋವಿಂದರಾಜು ಮನೆಯಲ್ಲಿ ಸಿಕ್ಕಿರುವ ಡೈರಿ ನಕಲಿ ಎಂದು ವಿಧಿವಿಜ್ಞಾನ ಪ್ರಯೋಗಾಲಯ ವರದಿ ನೀಡಿದೆ ಎನ್ನುವುದು ಮೂರ್ಖತನದ ಪರಮಾವಧಿ. ವಿಚಾರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಲೆಬುಡವಿಲ್ಲದ ರೀತಿ ಮಾತನಾಡುತ್ತಿದ್ದಾರೆ. ಸ್ಟೀಲ್ ಬ್ರಿಡ್ಜ್ ಗುತ್ತಿಗೆ ನೀಡುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ಸದಸ್ಯರಿಗೆ 65 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿರುವುದು ಗೋವಿಂದರಾಜು ಡೈರಿಯಲ್ಲಿ  ಉಲ್ಲೇಖವಾಗಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ ಎಂದಿದ್ದಾರೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: