ಮೈಸೂರು

ನ್ಯಾಯಾಲಯಕ್ಕೆ ಹಾಜರಾದ ಸುನಿಲ್ ಬೋಸ್ : ಎಪ್ರಿಲ್ 5ಕ್ಕೆ ವಿಚಾರಣೆ ಮುಂದೂಡಿಕೆ

ಅಕ್ರಮ ಮರಳುಗಾರಿಕೆ ಪರವಾನಗಿ ನೀಡಲು ಲಂಚ ಪಡೆಯುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗೆ ಪ್ರೇರೇಪಣೆ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ಮಂಗಳವಾರ (ಮಾ.21) ನ್ಯಾಯಾಲಯಕ್ಕೆ ಹಾಜರಾದರು.

ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರಾದ ಸುನೀಲ್ ಬೋಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಲಾಗಿದೆ. 3ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಧೀಂದ್ರನಾಥ ಸಮ್ಮುಖದಲ್ಲಿ ವಿಚಾರಣೆ ನಡೆಯುತ್ತಿದೆ. ಸಾಕ್ಷಿಗಳ ವಿಚಾರಣೆ ನಡೆದಿದ್ದು, ನ್ಯಾಯಾಲಯ ಎಪ್ರಿಲ್ 5ಕ್ಕೆ ವಿಚಾರಣೆಯನ್ನು ಮುಂದೂಡಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: