ಮೈಸೂರು

ರಾಮಾನುಜ ಸಹಸ್ರಮಾನೋತ್ಸವ ಆಚರಣೆಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ ವಿರೋಧಿಸಿ ಪ್ರತಿಭಟನೆ

ಶ್ರೀರಾಮಾನುಜ ಸಹಸ್ರಮಾನೋತ್ಸವದ ಆಚರಣೆಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯವಹಿಸಿರುವುದನ್ನು ಖಂಡಿಸಿ ಮೈಸೂರು ನಗರ ಹಾಗೂ ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.

ಮೈಸೂರಿನ ನ್ಯಾಯಾಲಯದ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಬಳಿ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ರಾಮಾನುಜ ಸಹಸ್ರಮಾನೋತ್ಸವ ಆಚರಣೆಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ತಾಳಿದೆ. ಇದು ಸರಿಯಲ್ಲ. ಕೂಡಲೇ ಸರ್ಕಾರ ಆಚರಣೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ  ಡಿಟಿ ಪ್ರಕಾಶ್, ವಿಕ್ರಂ ಅಯ್ಯಂಗಾರ್ ಸೇರಿದಂತೆ ನೂರಕ್ಕೂ ಅಧಿಕ ವಿಪ್ರರು ಪಾಲ್ಗೊಂಡಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: