ಮೈಸೂರು

ನಾಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಜಿಲ್ಲಾ ಪ್ರವಾಸ

ಮೈಸೂರು,ಮೇ.20:- ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ನಾಳೆ, ಮೇ.21ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಗುರುವಾರ ಬೆಳಿಗ್ಗೆ 6.30ಕ್ಕೆ ತಮ್ಮ ನಿವಾಸದಿಂದ ಚನ್ನಪಟ್ಟಣ-ಮದ್ದೂರು-ಭಾರತೀನಗರ-ಮಳವಳ್ಳಿ-ಚಿದ್ರಹಳ್ಳಿ ಮಾರ್ಗವಾಗಿ ಟಿ.ನರಸೀಪುರಕ್ಕೆ ಪ್ರಯಾಣ ಬೆಳೆಸಲಿದ್ದು, 9ಗಂಟೆಗೆ ಮನ್ರೆಗಾ ಯೋಜನೆಯ ಕಾಮಗಾರಿಗಳು ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಸ್ಥಳಪರಿಶೀಲನೆ, ದೊಡ್ಡಹುಂಡಿಕೆರೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ, ಟಿ.ದೊಡ್ಡಾಪುರ ಕೆರೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ, ಮಾವಿನ ಹಳ್ಳಿಯಲ್ಲಿ ನಡೆಯುತ್ತಿರುವ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಅಭಿವೃದ್ಧಿ ಕಾಮಗಾರಿ ವೀಕ್ಷಣೆ, 11.30ಕ್ಕೆ ಮೈಸೂರು ಜಿ.ಪಂ.ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಗತಿ ಪರಿಶಿಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಮಧ್ಯಾಹ್ನ ಮೂರುಗಂಟೆಗೆ ಜೂ.5ರ ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 4ಗಂಟೆಗೆ ಚೆಸ್ಕಾಂ, ಅರಣ್ಯ ಮತ್ತು ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: