ಮೈಸೂರು

ನಗರಪಾಲಿಕೆಯಿಂದ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಣೆ

ಮೈಸೂರು,ಮೇ 20-ಮೈಸೂರು ಮಹಾನಗರಪಾಲಿಕೆ ವತಿಯಿಂದ ಇಂದು ಕಾಡಾ ಕಚೇರಿ ಆವರಣದಲ್ಲಿ 220 ಮಂದಿ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಿಸಲಾಯಿತು.

ಈ ಬಗ್ಗೆ ಮಾತನಾಡಿದ ಮೈಸೂರು ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಎಂ.ಮಹದೇವಸ್ವಾಮಿ, ಕೊರೊನಾ ಲಾಕ್ ಡೌನ್ ನಿಂದಾಗಿ ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದರು. ಹೀಗಾಗಿ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಿಸಬೇಕೆಂದು ನಗರಪಾಲಿಕೆ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಗಿತ್ತು. ಇದಕ್ಕೆ ಸ್ಪಂದಿಸಿದ ಅವರು ಇಂದು ನಗರಪಾಲಿಕೆ ಕಡೆಯಿಂದ ದಿನಸಿ ಕಿಟ್ ಕೊಡಿಸಿದ್ದಾರೆ. ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸಂಘದ ಸಿ.ಎಸ್.ನಂಜುಂಡಸ್ವಾಮಿ, ಎಚ್.ಎಸ್.ಛಾಯಾ ಇತರರು ಉಪಸ್ಥಿತರಿದ್ದರು. (ಎಚ್.ಎನ್, ಎಂ.ಎನ್)

 

Leave a Reply

comments

Related Articles

error: