ಮೈಸೂರು

ಆದಿತ್ಯನಾಥ ಯೋಗಿ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆ : ಹಾಸನ ಬಿಜೆಪಿ ಯುವಮೋರ್ಚಾದಿಂದ ದೂರು ಸಲ್ಲಿಕೆ

ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ ಯೋಗಿ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ  ಹಿನ್ನೆಲೆಯಲ್ಲಿ ಹಾಸನ ಬಿಜೆಪಿ ಯುವಮೋರ್ಚಾ ವತಿಯಿಂದ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ದೂರು ಸಲ್ಲಿಸಲಾಯಿತು.

ಹಾಸನ ಎಸ್ ಪಿ ರಾಹುಲ್ ಕುಮಾರ್  ಅವರಿಗೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಾಗೇಶ್ ನೇತೃತ್ವದಲ್ಲಿ ದೂರು ಸಲ್ಲಿಸಲಾಯಿತು. ಪ್ರಭಾ ಎನ್ ಬೆಳವಂಗಲ ಯೋಗಿ ಆದಿತ್ಯನಾಥ್ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಪೋಟೋವನ್ನು  ಅಪ್ ಲೋಡ್ ಮಾಡಿದ್ದ ಹಿನ್ನೆಲೆಯಲ್ಲಿ ದೂರು ನೀಡಿ ಪ್ರಕರಣ ದಾಖಲಿಸಲಾಗಿದೆ.
ಎಫ್.ಐ.ಆರ್ ದಾಖಲಿಸಿ ಆಕೆಯನ್ನು ಬಂಧಿಸಬೇಕು. ಇಲ್ಲವಾದರೆ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸುತ್ತೇವೆ ಎಂದು ಬಿಜೆಪಿ ಯುವ ಮೋರ್ಚಾ ಒತ್ತಾಯಿಸಿದೆ. ಇದೇ ಸಂದರ್ಭ ಆಕೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಗಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: