ಮೈಸೂರು

ಕಲೆ-ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು : ಚೆನ್ನಪ್ಪ

ಕಲೆಯನ್ನು ಮತ್ತು ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚೆನ್ನಪ್ಪ ತಿಳಿಸಿದರು.

ಮೈಸೂರಿನ ಮಹಾರಾಜ ಕಾಲೇಜಿನ ಜೂನಿಯರ್ ಬಿ.ಎ ಹಾಲ್ ನಲ್ಲಿ ಕನ್ನಡ ಮತ್ತು ಜಾನಪದ ಪರಿಷತ್ ಜಿಲ್ಲಾ ಘಟಕ,  ಮಹಾರಾಜ ಕಾಲೇಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶಯದಲ್ಲಿ ಏರ್ಪಡಿಸಲಾದ ವಿಶ್ವಗೊಂಬೆಯಾಟ ದಿನಾಚರಣೆ ಮತ್ತು ಸೂತ್ರದ ಗೊಂಬೆಯಾಟ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ  ಮಾತನಾಡಿದ ಅವರು ಮರೆಯಾಗುತ್ತಿರುವ ಗೊಂಬೆಯಾಟಕ್ಕೆ ಮತ್ತೆ ಜೀವತುಂಬುತ್ತಿರುವುದು ಸಂತಸದ ವಿಷಯ.ಗೊಂಬೆಯಾಟದ ಕಲಾವಿದರು ಕಾಣ ಸಿಗುತ್ತಿಲ್ಲ. ಕಲೆಯನ್ನು ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದರು. ವಿದ್ಯಾರ್ಥಿಗಳು ಕಲೆಯನ್ನು ಮೈಗೂಡಿಸಿಕೊಂಡು ಪ್ರೋತ್ಸಾಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಕಲಾವಿದ ಹಲ್ಲರೆ ತಮ್ಮಣ್ಣಾಚಾರ್, ಪ್ರೊ.ಎಲ್.ಲಿಂಬ್ಯಾನಾಯ್ಕ್, ಎಚ್. ಕ್ಯಾತನಹಳ್ಳಿ ಪ್ರಕಾಶ್, ಕಾಲೇಜಿನ ಪ್ರಾಂಶುಪಾಲೆ ಪ್ರೊ.ಸಿ.ಪಿ.ಸುನೀತ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್-ಎಸ್.ಎಚ್)

 

Leave a Reply

comments

Related Articles

error: