ಮೈಸೂರು

ಮೆಕ್ಕೆಜೋಳ ಹೇರಿಕೊಂಡು ತೆರಳುತ್ತಿದ್ದ ಲಾರಿಗೆ ವಿದ್ಯುತ್ ತಂತಿ ಸ್ಪರ್ಶ : ಮೂವರು ಕೂಲಿ ಕಾರ್ಮಿಕರ ದುರ್ಮರಣ

ಮೈಸೂರು,ಮೇ.22:-  ಮೆಕ್ಕೆಜೋಳ ಹೇರಿಕೊಂಡು ತೆರಳುತ್ತಿದ್ದ ಲಾರಿಗೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಮೂವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಟಿ‌.ನರಸೀಪುರ ತಾಲೂಕಿನ ಕೀಳನಪುರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ನರಸೀಪುರ ತಾಲೂಕಿನ ಹೊಸೂರು ಗ್ರಾಮದ ಮಹದೇವು, ತೇಜು ಮತ್ತು ಮಹದೇವ್ ನಾಯಕ  ಎಂದು ಗುರುತಿಸಲಾಗಿದೆ.  ಮೆಕ್ಕೆಜೋಳದ ಮೇವು ತುಂಬಿದ್ದ ಲಾರಿಗೆ ವಿದ್ಯುತ್ ಪ್ರವಹಿಸುತ್ತಿದ್ದ  ತಂತಿ  ತಗುಲಿದ ಪರಿಣಾಮ ಲಾರಿಯಲ್ಲಿದ್ದ ಕೂಲಿ ಕಾರ್ಮಿಕರರಿಬ್ಬರು ಸ್ಥಳದಲ್ಲೇ ಮೃತಪಟ್ಟರೆ ಮತ್ತೋರ್ವ ಕೂಲಿ ಕಾರ್ಮಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಅಸುನೀಗಿದ್ದಾರೆ ಎನ್ನಲಾಗುತ್ತಿದೆ.

ಕೀಳನಪುರದಿಂದ ಪಿಂಜರಾಪೋಲ್ ಗೆ ಮೇವು ಸಾಗಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ವರುಣ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಮೈಸೂರಿನ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: