ಕರ್ನಾಟಕ

ಕಲಬುರಗಿಯಲ್ಲಿ ಸಿಲಿಂಡರ್ ಸ್ಫೋಟ: ಓರ್ವ ಸಾವು; ಮೂವರಿಗೆ ಗಾಯ

ಕಲಬುರಗಿ,ಮೇ 22-ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಕಲಬುರಗಿಯಲ್ಲಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ನಡೆದಿದೆ.

ಸೇಡಂನ ಮೋಮಿನಪುರ ಬಡಾವಣೆಯ ರಾಜು ತಾಯಿತ್ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ರಾಜು ತಾಯಿತ್ (50) ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿದ್ದ ನಾಲ್ವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಜು ತಾಯಿತ್ ಕೊನೆಯುಸಿರೆಳೆದಿದ್ದಾರೆ.

ಗಾಯಾಳುಗಳ ಪೈಕಿ ಮತ್ತೋರ್ವರ ಸ್ಥಿತಿ ಗಂಭೀರವಾಗಿದೆ. ಮೃತನ ತಾಯಿ ಗಂಗಮ್ಮ ತಾಯಿತ್ (70), ಪತ್ನಿ ಸುಮಾ ತಾಯಿತ್ (40), ಮಗ ಬಸಪ್ಪ ತಾಯಿತ್ (22) ಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. (ಎಂ.ಎನ್)

Leave a Reply

comments

Related Articles

error: