ದೇಶಪ್ರಮುಖ ಸುದ್ದಿ

ಅವಂತಿಪೋರಾದಲ್ಲಿ ಇಬ್ಬರು ಉಗ್ರರನ್ನು ಬಂಧಿಸಿದ ಭಾರತೀಯ ಸೇನಾಪಡೆ

ಶ್ರೀನಗರ,ಮೇ 22-ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆಯವರು ಇಂದು ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ.

ಬಂಧಿತ ಉಗ್ರರು ಅನ್ಸರ್ ಗಜ್ವತ್ ಉಲ್ ಹಿಂದ್ ಹಾಗೂ ಹಿಜ್ಬ್ ಉಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆಂದು ಹೇಳಲಾಗುತ್ತಿದೆ.

ತ್ರಾಲ್ ನಿವಾಸಿಗಳಾಗಿದ್ದ ಈ ಇಬ್ಬರೂ ಉಗ್ರರು, ಉಗ್ರರ ಸಂಘಟನೆಗಳಿಗೆ ಕೆಲ ಸೂಕ್ಷ್ಮ ಮಾಹಿತಿಗಳನ್ನು ರವಾನಿಸುವುದರ ಜೊತೆ ಜೊತೆಗೆ ಉಗ್ರರಿಗೆ ನೆರವು ನೀಡುತ್ತಿದ್ದರು ಎಂದು ತಿಳಿದುಬಂದಿದೆ.

ಈ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆಯೇ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಸೇನಾಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. (ಎಂ.ಎನ್)

 

 

Leave a Reply

comments

Related Articles

error: