ಪ್ರಮುಖ ಸುದ್ದಿ

ರಾಜ್ಯದಲ್ಲಿ 10 ಲಕ್ಷ ಮನೆಗಳ ನಿರ್ಮಾಣದ ಗುರಿ : ಸಚಿವ ವಿ.ಸೋಮಣ್ಣ

ರಾಜ್ಯ( ಮಡಿಕೇರಿ) ಮೇ 22 :- ಸರ್ಕಾರ ಮುಂದಿನ 24 ತಿಂಗಳಲ್ಲಿ 10 ಲಕ್ಷ ಮನೆಗಳನ್ನು ನಿರ್ಮಿಸುವ ಉದ್ದೇಶ ಹೊಂದಿದೆ. ಗ್ರಾಮೀಣ ಪ್ರದೇಶದಲ್ಲಿ 5.50 ಲಕ್ಷ ರೂ. ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ 4.50 ಲಕ್ಷ ರೂ.ಗಳಲ್ಲಿ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ರಾಜ್ಯ ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಂಬೂರು ಮತ್ತು ಮದೆನಾಡು ಬಳಿ ಸಂತ್ರಸ್ತರಿಗೆ ನಿರ್ಮಿಸಲಾಗುತ್ತಿರುವ ಮನೆಗಳು ಪೂರ್ಣಗೊಂಡಿದೆ. ಹಾಗೆಯೇ ಗಾಳಿಬೀಡು ಮತ್ತು ಬಿಳಿಗೇರಿಯಲ್ಲಿ ಸಂತ್ರಸ್ತರಿಗೆ ನಿರ್ಮಾಣವಾಗುತ್ತಿರುವ ಮನೆಗಳನ್ನು ಮೂರು-ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್‍ಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದನ್ನು ಅನುಷ್ಠಾನಗೊಳಿಸಲಾಗುವುದು. ಸಂಕಷ್ಟದಲ್ಲಿರುವ ಎಲ್ಲರಿಗೂ ಸರ್ಕಾರ ಸ್ಪಂದಿಸಲಿದೆ ಎಂದರು.
(ಕೆಸಿಐ,ಎಸ್.ಎಚ್)

Leave a Reply

comments

Related Articles

error: