ಪ್ರಮುಖ ಸುದ್ದಿ

ಸಂತ್ರಸ್ತರ ನೂತನ ಮನೆ ಪರಿಶೀಲನೆ

ರಾಜ್ಯ( ಮಡಿಕೇರಿ) ಮೇ 22 :- ಪ್ರಕೃತಿ ವಿಕೋಪದ ಸಂತ್ರಸ್ತರಿಗೆ ಮದೆನಾಡು ಬಳಿ ನಿರ್ಮಿಸಲಾಗಿರುವ ಮನೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಶುಕ್ರವಾರ ಪರಿಶೀಲಿಸಿದರು. ಮನೆಗಳ ನಿರ್ಮಾಣ ಕಾರ್ಯ ಗುಣಮಟ್ಟದಿಂದ ಕೂಡಿದೆ, ಸಣ್ಣಪುಟ್ಟ ನ್ಯೂನತೆಗಳನ್ನು ಸರಿ ಪಡಿಸಲಾಗುವುದು ಎಂದರು.
ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಸುನಿಲ್ ಸುಬ್ರಮಣಿ, ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ವಿ.ರಾಮ್ ಪ್ರಸಾದ್ ಮನೋಹರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ., ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಮತ್ತಿತರರು ಹಾಜರಿದ್ದರು.(ಕೆಸಿಐ,ಎಸ್.ಎಚ್)

Leave a Reply

comments

Related Articles

error: