ಮೈಸೂರು

ಸುಪ್ರೀಂ ಕೋರ್ಟ್ ಆದೇಶಕ್ಕೆ ವಿರೋಧ : ಪ್ರತಿಭಟನೆ

ಸುಪ್ರೀಂ ಕೋರ್ಟ್ ಆದೇಶ ನೀಡಿರುವುದನ್ನು ವಿರೋಧಿಸಿ  ಮೈಸೂರು ನಗರದ ನ್ಯಾಯಾಲಯದ ಮುಂಭಾಗ ಇರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಮೈಸೂರು ಜಿಲ್ಲಾ ಕನ್ನಡ ಚಳುವಳಿ ಹೋರಾಟಗಾರರ ಸಂಘದವತಿಯಿಂದ ಮಂಗಳವಾರ ಸಾಯಂಕಾಲ ಪ್ರತಿಭಟನೆ ನಡೆಯಿತು.

ಸುಪ್ರೀಂ  ಕೋರ್ಟ್ ತಮಿಳುನಾಡಿಗೆ ಪ್ರತಿದಿನ 2ಸಾವಿರ ಕ್ಯೂಸೆಕ್  ಕಾವೇರಿ ನದಿ ನೀರನ್ನು  ಬಿಡಬೇಕೆಂದು ಆದೇಶ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.  ತಮಿಳುನಾಡಿಗೆ ನೀರು ಹರಿಸಿದರೆ  ಕರ್ನಾಟಕದ ಜನತೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಕುತ್ತಿಗೆಗೆ ಹಗ್ಗವನ್ನು ಹಾಕಿ ಸಾಂಕೇತಿಕವಾಗಿ ಪ್ರದರ್ಶಿಸಿದರು.

ಪ್ರತಿಭಟನೆಯಲ್ಲಿ ಮೈಸೂರು ಜಿಲ್ಲಾ ಕನ್ನಡ ಚಳುವಳಿ ಹೋರಾಟಗಾರರ ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್ ನೇತೃತ್ವದಲ್ಲಿ 50ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: