ಮೈಸೂರು

ಅನಾರೋಗ್ಯದಿಂದ  ಬಳಲುತ್ತಿದ್ದ ಯುವಕ ಮನನೊಂದು ಕಲ್ಯಾಣಿಗೆ ಜಿಗಿದು ಆತ್ಮಹತ್ಯೆ

ಮೈಸೂರು. ಮೇ 26: –  ಅನಾರೋಗ್ಯದಿಂದ  ಬಳಲುತ್ತಿದ್ದ ಯುವಕನೋರ್ವ ಮನನೊಂದು   ಕಲ್ಯಾಣಿಗೆ ಜಿಗಿದು   ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು  ಹುಣಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ.

ಮೃತನನ್ನು ಸ್ಥಳೀಯ ನಿವಾಸಿ ರಂಜನ್ (22) ಎಂದು ಗುರುತಿಸಲಾಗಿದೆ. ಈತ ಇಂದು ಸಾಯಂಕಾಲ 4.30ರ ಸಮಯದಲ್ಲಿ ಕಲ್ಯಾಣಿಗೆ ಜಿಗಿದಿದ್ದನ್ನು ದಾರಿಹೋಕರು ನೋಡಿದ್ದು ವಿಜಯನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ವಿಜಯ ನಗರ ಠಾಣಾ ಇನ್ಸಪೆಕ್ಟರ್ ಬಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯುವಕನ ಮನೆಯವರ ನ್ನು ಸ್ಥಳಕ್ಕೆ ಕರೆಸಲಾಗಿ ಅವನು ಅನಾರೋಗ್ಯ ದಿಂದ ಬಳಲುತ್ತಿದ್ದ . ಅದೇ ಕಾರಣಕ್ಕೆ ಬೇಸರ ಮಾಡಿಕೊಂಡಿದ್ದ. ಈ ಕಾರಣಕ್ಕಾಗಿಯೇ  ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾ ಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: