ಕರ್ನಾಟಕಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಭಾರಿ ಮಳೆ: ಇಬ್ಬರು ಮಹಿಳೆಯರು ಬಲಿ

ಬೆಂಗಳೂರು,ಮೇ 27-ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಓರ್ವ ಯುವತಿ, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೊಮ್ಮನಹಳ್ಳಿ ಸಮೀಪದ ಬೇಗೂರಿನಲ್ಲಿ ಹೇಮಾ (49), ನಂದಿನಿ ಲೇಟೌಟ್ ರಾಮಣ್ಣ ಬ್ಲಾಕ್‌ನಲ್ಲಿ ಶಿಲ್ಪಾ (22) ಯುವತಿ ಸಾವನ್ನಪ್ಪಿದ್ದಾರೆ.

ಸ್ಕೂಟಿಯಲ್ಲಿ ಹೋಗುತ್ತಿದ್ದ ಹೇಮಾ ಅವರ ಮೇಲೆ ಭಾರಿ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮರದ ಅಡಿಯಲ್ಲಿ ಸಿಲುಕಿದ ಹೇಮಾ ಅವರ ಸಹಾಯಕ್ಕೆ ಸುತ್ತಮುತ್ತಲಿನ ಜನ ಧಾವಿಸಿದರೂ ಪ್ರಯೋಜನವಾಗಲಿಲ್ಲ.

ನಂದಿನಿ ಲೇಟೌಟ್ ರಾಮಣ್ಣ ಬ್ಲಾಕ್‌ನಲ್ಲಿ ನಡೆದ ಇನ್ನೊಂದು ಘಟನೆಯಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಇಟ್ಟಿಗೆ ಬಿದ್ದು ಶಿಲ್ಪಾ ಮೃತಪಟ್ಟಿದ್ದಾರೆ. ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಿಂದ ಇಟ್ಟಿಗೆಗಳು ಪಕ್ಕದ ಮನೆಯ ಮೇಲೆ ಬಿದ್ದು, ದುರ್ಘಟನೆ ಸಂಭವಿಸಿದೆ. ಘಟನೆ ನಡೆದ ತಕ್ಷಣ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾರೆ. (ಎಂ.ಎನ್)

Leave a Reply

comments

Related Articles

error: