ಕರ್ನಾಟಕಪ್ರಮುಖ ಸುದ್ದಿ

3ನೇ ದಿನಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ; ಸಿಎಂ ಭರವಸೆ ನಂತರವೂ ಮುಂದುವರಿಕೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಉಪ ಚುನಾವಣೆ ಬಳಿಕ ಬೇಡಿಕೆ ಈಡೇರಿಸುವ ಸಿಎಂ ಸಿದ್ದರಾಮ್ಯಯ ಅವರ ಭರವಸೆಗೂ ಬಗ್ಗದೆ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಗ್ಗೆ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಸಿದ್ಧವಿದೆ. ಪ್ರಸ್ತುತ 2 ಕ್ಷೇತ್ರಗಳ ಉಪ ಚುನಾವಣೆ ಇದ್ದು, ಬಳಿಕ ಸಮಸ್ಯೆ ಬಗೆಹರಿಸುವುದಾಗಿ ಸದನಕ್ಕೆ ಮಾಹಿತಿ ನೀಡಿದರು.

ಇನ್ನು ಇದೇ ವಿಚಾರ ವಿಧಾನ ಪರಿಷತ್‍ನಲ್ಲೂ ಭಾರೀ ಚರ್ಚೆಗೆ ಕಾರಣವಾಗಿದ್ದು, ವಿಧಾನ ಪರಿಷತ್‍ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಗೃಹ ಸಚಿವ ಜಿ ಪರಮೇಶ್ವರ ಅವರು, ಸರ್ಕಾರ ಮಾತುಕತೆ ನಡೆಸಿದಾಗ ಸಂಧಾನಕ್ಕೆ ಒಪ್ಪಿದ್ದ ಅಂಗನವಾಡಿ ಕಾರ್ಯಕರ್ತೆಯರು, ಬಳಿಕ ಮತ್ತೆ ಪ್ರತಿಭಟನೆ ಮುಂದುವರೆಸಿದ್ದಾರೆ ಎಂದು ಹೇಳಿದರು.

ಇನ್ನು ಸಮಸ್ಯೆ ಈಡೇರದ ಹೊರತು ಯಾವುದೇ ಕಾರಣಕ್ಕೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಕಾರ್ಯಕರ್ತೆಯರು, ಫ್ರೀಡಂಪಾರ್ಕ್‍ನಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ. ವೇತನ ಹೆಚ್ಚಿಸಿ, ಇಲ್ಲವೇ ಜೈಲಿಗೆ ಕಳುಹಿಸಿ ಎಂದು ಅವರು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಕನಿಷ್ಠ 10 ಸಾವಿರ ರು. ವೇತನ ನಿಗದಿ ಬಗ್ಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಬೇಕು ಎಂಬುದು ಅವರ ಪ್ರಮುಖ ಬೇಡಿಕೆ.

(ಎನ್‍.ಬಿ.ಎನ್)

Leave a Reply

comments

Related Articles

error: