ನಮ್ಮೂರುಮೈಸೂರು

ಪ್ರವಾಸಿಗರಿಗೆ ಸೌಕರ್ಯ ಒದಗಿಸುವಲ್ಲಿ ಮೈಸೂರು ವಿಫಲ

ಕೃಷ್ಣಮೂರ್ತಿಪುರಂ: ಮೈಸೂರು ಪ್ರವಾಸಿ ಸ್ಥಳವೆಂದೇ ಗುರುತಿಸಿಕೊಂಡಿದ್ದರೂ ಪ್ರವಾಸಿಗರು ಅವುಗಳನ್ನು ತಲುಪಬೇಕಾದ ಮೂಲ ಸೌಕರ್ಯಗಳನ್ನು ದೊರಕಿಸಿಕೊಡುವಲ್ಲಿ ವಿಫಲವಾಗಿದೆ ಎಂದು ಶಾಸಕ ವಾಸು ಹೇಳಿದರು.

ಕೃಷ್ಣಮೂರ್ತಿಪುರಂನಲ್ಲಿ ಹೋಟೆಲ್ ಮಾಲೀಕರ ಸಂಘ ಮತ್ತು ಮೈಸೂರು ಟ್ರಾವೆಲ್ಸ್ ಅಸೋಸಿಯೇಶನ್ ವತಿಯಿಂದ ವಿಶ್ವಪ್ರವಾಸೋದ್ಯಮ ದಿನದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ನಗರದ ಯಾದವಗಿರಿ, ಒಂಟಿಕೊಪ್ಪಲು, ಗೋಕುಲಂ ಬಡಾವಣೆಯ  ರಸ್ತೆಗಳು ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ಯೋಗ್ಯವಿಲ್ಲದಂತಾಗಿದೆ. ಪ್ರವಾಸಿಗರು ಸಂಚರಿಸಲು ತೊಂದರೆಯಾಗುತ್ತಿದೆ. ಅದರಿಂದ ಪ್ರವಾಸಿಗರಿಗೆ ಅಗತ್ಯವಾದ ಮೂಲ ಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಮಾಜಿ ಆಯುಕ್ತ ಡಾ.ಸಿ.ಜಿ.ಬೆಟಸೂರುಮಠ, ಕಾರು ಚಾಲಕ ಮೆಹಬೂಬ್ ಬೇಗ್, ಪೊಲೀಸ್ ಕಾನ್ಸ್ ಟೇಬಲ್ ಕಲ್ಲೇಶ್, ಹೆಚ್.ಖುಷಿ, ಶಿವಶಂಕರ್ ಅವರನ್ನು ಸನ್ಮಾನಿಸಲಾಯಿತು.

ಯುವರಾಜ ಕೃಷ್ಣದತ್ತ ಚಾಮರಾಜ ಒಡೆಯರ್, ಹೋಟೆಲ್ ಮಾಲಿಕರ ಸಂಘದ ಅಧ್ಯಕ್ಷ ಸಿ.ನಾರಾಯಣ ಗೌಡ, ಚಾಲಕರ ಸಂಘದ ಅಧ್ಯಕ್ಷ ಸಿ.ಎ.ಜಯಕುಮಾರ್, ಪ್ರಶಾಂತ ಬಿ.ಎಸ್. ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: