ಕರ್ನಾಟಕಪ್ರಮುಖ ಸುದ್ದಿ

ಎಸ್.ಎಂ. ಕೃಷ್ಣ ವ್ಯಕ್ತಿತ್ವದಿಂದ ಬಿಜೆಪಿಗೆ ಶಕ್ತಿ : ಅನಂತ್ ಕುಮಾರ್

ನವದೆಹಲಿ : ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಅವರು ಬಿಜೆಪಿಗೆ ಸೇರ್ಪಡೆ ಆಗುತ್ತಿರುವುದಕ್ಕೆ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರು ಹರ್ಷ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲಿ ಕೃಷ್ಣ ಅವರಿಗಿರುವ ಪ್ರಗತಿಪರ ವ್ಯಕ್ತಿತ್ವದಿಂದ ಕರ್ನಾಟಕದಲ್ಲಿ ಬಿಜೆಪಿಗೆ ಶಕ್ತಿ ದೊರಕಲಿದೆ. ಅವರನ್ನು ಹೃದಯಪೂರ್ವಕವಾಗಿ ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದು ಸುದ್ದಿ ಸಂಸ್ಥೆಯೊಂದಿಗೆ ಮಾತನಾಡುತ್ತಾ ಪ್ರತಿಕ್ರಿಯಿಸಿದರು.

ಎಸ್.ಎಂ.ಕೃಷ್ಣ ಅವರು ಇಂದು ಸಂಜೆ ಬಿಜೆಪಿಗೆ ಸೇರ್ಪಡೆಯಾಗಲಿದ್ದು, ಕಳೆದ ವಾರ ತಮ್ಮ ಸೋದರಿಯ ನಿಧನ ಹಿನ್ನೆಲೆಯಲ್ಲಿ ಅವರ ಸೇರ್ಪಡೆಯನ್ನು ಮುಂದೂಡಲಾಗಿತ್ತು.

(ಎನ್‍ಬಿಎನ್‍)

Leave a Reply

comments

Related Articles

error: