ಮೈಸೂರು

ನಾಮಪತ್ರ ಪರಿಶೀಲನೆ : ಎರಡು ತಿರಸ್ಕೃತ

ನಂಜನಗೂಡು ಉಪ ಚುನಾವಣೆಗೆ ಸ್ಪರ್ಧಿಸಲು ಉಮೇದುವಾರಿಕೆ ಸಲ್ಲಿಸಿದ್ದ ಅಭ್ಯರ್ಥಿಗಳ ನಾಮಪತ್ರಗಳ ಪರಿಶೀಲನೆ ಬುಧವಾರ ನಡೆದಿದ್ದು, ಎರಡು ನಾಮಪತ್ರಗಳು ತಿರಸ್ಕೃತಗೊಂಡಿವೆ ಎಂದು ಚುನಾವಣಾಧಿಕಾರಿ ಜೆ. ಜಗದೀಶ್ ತಿಳಿಸಿದರು.

ಚುನಾವಣಾ ಕಣಕ್ಕೆ ಒಟ್ಟು 14 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದು, ಈ ಪೈಕಿ 12 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದೆ. ಇಬ್ಬರ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತವಾಗಿವೆ. ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ರೇಣುಕಾ ಆರ್, ಹಾಗೂ ಶಿವಪ್ಪ ಅವರ ನಾಮಪತ್ರಗಳು ತಿರಸ್ಕೃತಗೊಂಡಿದ್ದು, ಮಾ.24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ತಿಳಿಸಿದರು. (ಎಸ್.ಎನ್-ಎಸ್.ಎಚ್)

 

Leave a Reply

comments

Related Articles

error: