
ಮೈಸೂರು
ಎಂಸಿಡಿಸಿಸಿ ಬ್ಯಾಂಕ್ ಹಾಗೂ ಮೈಮುಲ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ 3000ರೂಗಳ ಚೆಕ್ ವಿತರಣೆ
ಮೈಸೂರು,ಮೇ.30:- ಕೊರೋನಾ ಮಹಾಮಾರಿಯಿಂದ ರೈತರು ಹಾಗೂ ದೇಶದ ಜನತೆ ಜೀವನ ಸಾಗಿಸಲು ಕಷ್ಟಪಡುತ್ತಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಜನರನ್ನು ಆರ್ಥಿಕವಾಗಿ ಸದೃಢಗೊಳಿಸುವ ಸಲುವಾಗಿ ಪಿರಿಯಾಪಟ್ಟಣದಲ್ಲಿ ನಿನ್ನೆ ಮೈಸೂರಿನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವರಾದ ಎಸ್ ಟಿ ಸೋಮಶೇಖರ್ ಹಾಗೂ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಜಿ.ಡಿ.ಹರೀಶ್ ಗೌಡ ಅವರ ನೇತೃತ್ವದಲ್ಲಿ “ಎಂಸಿಡಿಸಿಸಿ ಬ್ಯಾಂಕ್ ಹಾಗೂ ಮೈಮುಲ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ 3000ರೂಗಳ ಚೆಕ್ ನೀಡಿ ಗೌರವಿಸಿದರು.
ಇದೇ ವೇಳೆ ಪಿರಿಯಾಪಟ್ಟಣ ತಾಲೂಕಿನ ಹೊಸ ರೈತ ಸದಸ್ಯರಿಗೆ ಕೆಸಿಸಿ ಬೆಳೆ ಸಾಲ ವಿತರಣೆ ಮಾಡಲಾಯಿತು. (ಕೆ.ಎಸ್,ಎಸ್.ಎಚ್)