ಕರ್ನಾಟಕಪ್ರಮುಖ ಸುದ್ದಿ

ಕೋವಿಡ್ ವಿರುದ್ಧ ಹೋರಾಟ: ವೈದ್ಯರು, ದಾದಿಯರಿಗೆ ಸರ್ಕಾರ ಸಂಬಳ ನೀಡಿಲ್ಲ; ಯು.ಟಿ.ಖಾದರ್ ಆರೋಪ

ಮಂಗಳೂರು,ಮೇ 30-ಜೀವದ ಹಂಗನ್ನು ತೊರೆದು ಕೋವಿಡ್-19 ವಿರುದ್ಧ ಹೋರಾಡುತ್ತಿರುವ ವೈದ್ಯರು, ದಾದಿಯರಿಗೆ ಸರ್ಕಾರ ಎರಡು ತಿಂಗಳ ಸಂಬಳ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19 ವಿಚಾರದಲ್ಲಿ ಸರ್ಕಾರ ಪ್ರಚಾರ ತೆಗೆದುಕೊಳ್ಳುತ್ತಿದೆ ಎಂದು ಆಪಾದಿಸಿದ್ದಾರೆ.

ಕೋವಿಡ್-19 ವಾರಿಯರ್ ಎಂದರೆ ಅಷ್ಟೇ ಸಾಲಲ್ಲ. ಸೋಂಕು ನಿರ್ಮೂಲನೆಗೆ 15 ಸಾವಿರ ದುಡಿಯುವ ವರ್ಗ ಇದ್ದಾರೆ. ಇವರಿಗೆಲ್ಲ ತಕ್ಷಣ ವೇತನ ನೀಡಬೇಕು. ಆಶಾ ಕಾರ್ಯಕರ್ತೆಯರಿಗೂ ಸರಿಯಾಗಿ ಹಣ ಬಿಡುಗಡೆ ಮಾಡಿಲ್ಲ. ಸಿಎಂ ಹೆಚ್ಚುವರಿ ಕೊಡುತ್ತೇವೆ ಅಂತಾರೇ, ಮೊದಲು ಕೊಡುವ ಸಂಬಳ ಕೊಡಿ ಎಂದಿದ್ದಾರೆ.

ಎರಡು ತಿಂಗಳು ಸಮಯ ಇಲ್ಲದೆ ವೈದ್ಯರು ಕೆಲಸ ಮಾಡಿದ್ದಾರೆ. ಪಿಎಂ ಕೇರ್ ನಲ್ಲಿ ಸಂಗ್ರಹವಾದ ಹಣವನ್ನು ಕೊಡಲಿ. ಪಿಎಂ ಫಂಡ್ ನಲ್ಲಿ ಸಂಗ್ರಹವಾದ ಹಣದ ಲೆಕ್ಕ ಕೊಡಲಿ. ಯಾವುದಕ್ಕೆ ಖರ್ಚು ಮಾಡಿದ್ದಾರೆ ಎಂದು ಬಹಿರಂಗ ಮಾಡಲಿ. ಸರ್ಕಾರ ತಕ್ಷಣ ವೈದ್ಯರಿಗೆ ಸಂಬಳ‌ ನೀಡದಿದ್ದರೆ ಕಾಂಗ್ರೆಸ್ ನಿಂದ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದ್ದಾರೆ. (ಎಂ.ಎನ್)

Leave a Reply

comments

Related Articles

error: