ಮೈಸೂರು

ಕಳಲೆ ಕೇಶವಮೂರ್ತಿಯನ್ನು ಬೆಂಬಲಿಸುವಂತೆ ಡಾ.ಯತೀಂದ್ರ ಮನವಿ

ರಾಜ್ಯದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನಂಜನಗೂಡು ಕ್ಷೇತ್ರದ ಅಭಿವೃದ್ಧಿಗೆ 500 ಕೋಟಿ ರೂಗಳನ್ನು ಬಿಡುಗಡೆ ಮಾಡಿದೆ. ಈ ಬಾರಿಯೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಕೊಡಬೇಕು ಎಂದು ಕಾಂಗ್ರೆಸ್ ಮುಖಂಡ ಡಾ.ಯತೀಂದ್ರ ಸಿದ್ದರಾಮಯ್ಯ ಮನವಿ ಮಾಡಿದರು.

ನಂಜನಗೂಡು ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಪರವಾಗಿ ನಂಜನಗೂಡು ತಾಲೂಕಿನ ಮೊಬ್ಬಳ್ಳಿ, ಹೆಗ್ಗಡಹಳ್ಳಿ, ಶಿರಮಳ್ಳಿ, ಹೊಳಗೆರೆ, ಸೇರಿದಂತೆ ಹಲವು ಗ್ರಾಮಗಳಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ರಾಜ್ಯದಲ್ಲಿ ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ, ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಪ್ರತಿ ವರ್ಷ 19 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಶುದ್ಧ ಕುಡಿಯುವ ನೀರಿನ ಘಟಕಗಳು, ನದಿಮೂಲದಿಂದ ಕೆರೆಗಳಿಗೆ ನೀರು, ಗ್ರಾಮಗಳಿಗೆ ನೀರು, ರೈತರಿಗೆ ಬಡ್ಡಿರಹಿತ ಸಾಲ, ಸಾವಿರಾರು ಕಿ.ಮೀ. ರಸ್ತೆಗಳ ಅಭಿವೃದ್ಧಿ ಮಾಡಿರುವ ಕಾಂಗ್ರೆಸ್ ಸರ್ಕಾರವನ್ನು ಬೆಂಬಲಿಸಲು ಕಳಲೆ ಕೇಶವಮೂರ್ತಿಯನ್ನು ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ, ಜಿ.ಪಂ.ಮಾಜಿ ಸದಸ್ಯ ಮಾರುತಿ, ತಾ.ಪಂ. ಮಾಜಿ ಅಧ್ಯಕ್ಷ ತಮ್ಮಣ್ಣೇಗೌಡ, ತಾ.ಪಂ.ಉಪಾಧ್ಯಕ್ಷ ಗೋವಿಂದರಾಜು ಸೇರಿದಂತೆ ಮತ್ತಿತರರು ಡಾ.ಯತೀಂದ್ರ ಜೋತೆಗಿದ್ದರು. (ಬಿ.ಎಂ-ಎಸ್.ಎಚ್)

 

Leave a Reply

comments

Related Articles

error: